ಚಿಕ್ಕಮಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 2 ಕೋಟಿಗೂ ಅಧಿಕ ಮೌಲ್ಯದ ಚಿನ್ನವನ್ನ (Gold) ವಶಕ್ಕೆ ಪಡೆದು, ವಾಹನ ಚಾಲಕ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪಿಕಪ್ ವಾಹನದ ಮೂಲಕ ನಾಲ್ಕು ಬಾಕ್ಸ್ಗಳಲ್ಲಿ ಚಿನ್ನವನ್ನು ಸಾಗಾಟ ಮಾಡಲಾಗುತ್ತಿತ್ತು.