BWSSBಯಲ್ಲಿ ಚೀಫ್ ಅಕೌಂಟೆಂಟ್ ಆಗಿರುವ ಮಾಡಾಳು ಪ್ರಶಾಂತ್ ಕಚ್ಚಾ ವಸ್ತುಗಳ ಖರೀದಿ ಟೆಂಡರ್ಗಾಗಿ ಕೆಎಸ್ಡಿಎಲ್ ಅಧ್ಯಕ್ಷರ ಪರವಾಗಿ ಬರೋಬ್ಬರಿ 80 ಲಕ್ಷ ರೂಪಾಯಿ ಹಣ ಕೇಳಿದ್ದ ಎನ್ನಲಾಗಿದೆ. ಈ ವೇಳೆ 40 ಲಕ್ಷ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಲೋಕಾಯುಕ್ತ ಎಸ್ಪಿ ಅಶೋಕ್, ಇನ್ಸ್ಪೆಕ್ಟರ್ ಕುಮಾರ ಸ್ವಾಮಿ ನೇತೃತ್ವದಲ್ಲಿ ಲೋಕಾಯುಕ್ತರು ದಾಳಿ ನಡೆಸಿದ್ದರು.
ಇನ್ನು ಮಾಡಾಳ್ ವಿರೂಪಾಕ್ಷಪ್ಪ ತಮ್ಮ ಇನ್ನೊಬ್ಬ ಮಗನನ್ನ ಚುನಾವಣೆಗೆ ನಿಲ್ಲಿಸಬೇಕು ಅಂತ ಸಿದ್ದತೆ ನಡೆಸುತ್ತಿದ್ದಾರೆ. ಚನ್ನಗಿರಿ ಕ್ಷೇತ್ರದಿಂದ ಪುತ್ರ ಮಲ್ಲಿಕಾರ್ಜುನನನ್ನು ಈ ಬಾರಿ ಬಿಜೆಪಿಯಿಂದ ನಿಲ್ಲಿಸಲು ಚನ್ನಗಿರಿ ಕ್ಷೇತ್ರದ ಹಾಲಿ ಶಾಸಕ ಮಾಡಾಳ್ ವಿರೂಪಾಕ್ಷ ಸಿದ್ದತೆ ಮಾಡಿಕೊಳ್ತಾ ಇದ್ದರು. ಇದರ ನಡುವೆ ಪ್ರಶಾಂತ್ ಮಾಡಳ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದು, ಶಾಸಕರಿಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.