ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಸುಟ್ಟ ಗಾಯಗಳಿಂದ ಗಾಯಗೊಂಡಿದ್ದ ಶಾರೀಕ್ಗೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.
2/ 7
ಶಂಕಿತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆ ಎನ್ಐಎ ಅಧಿಕಾರಿಗಳು ಆಸ್ಪತ್ರೆಯಲ್ಲಿಯೇ ವಿಚಾರಣೆಗೆ ಒಳಪಡಿಸಿದ್ದರು.
3/ 7
ಇದೀಗ ಶಂಕಿತ ಉಗ್ರ ಶಾರೀಕ್ನನ್ನು ಬೆಂಗಳೂರಿನ ವಿಕ್ಟೋರಿಯಾ ಅಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ವಿಕ್ಟೋರಿಯಾ ಅಸ್ಪತ್ರೆಯ ಬರ್ನಿಂಗ್ ವಾರ್ಡ್ನಲ್ಲಿ ಶಾರೀಕ್ಗೆ ಚಿಕಿತ್ಸೆ ಮುಂದುವರಿಯಲಿದೆ.
4/ 7
ನಿನ್ನೆ ರಾತ್ರಿಯೇ ಶಾರೀಕ್ನನ್ನು ಮಂಗಳೂರಿನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಬರ್ನಿಂಗ್ ವಾರ್ಡ್ನಲ್ಲಿ ಶಾರೀಕ್ಗೆ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆ ಬಳಿಕ ಎನ್ಐಎ ಅಧಿಕಾರಿಗಳು ಶಾರೀಕ್ನನ್ನು ತಮ್ಮ ಕಸ್ಟಡಿಗೆ ಪಡೆದುಕೊಳ್ಳಲಿದ್ದಾರೆ.
5/ 7
ಇಬ್ಬರು ಇನ್ಸ್ಪೆಕ್ಟರ್, ಎನ್ಐಎ ಅಧಿಕಾರಿಗಳ ಭದ್ರತೆಯಲ್ಲಿ ಶಾರೀಕ್ನ್ನು ಮಂಗಳೂರಿನಿಂದ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ.
6/ 7
ಶಾರೀಕ್ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಆಸ್ಪತ್ರೆ ಮತ್ತು ವಾರ್ಡ್ ಬಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ (Police Protection) ಏರ್ಪಡಿಸಲಾಗಿದೆ.
7/ 7
ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆ ಬಳಿಯಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಶಾರೀಕ್ ಮೇಲೆ ಸ್ಲೀಪರ್ ಸೆಲ್ಗಳು ಆಕ್ಟಿವ್ ಆಗಿ ದಾಳಿ ಮಾಡುವ ಶಂಕೆಗಳು ವ್ಯಕ್ತವಾಗಿದ್ದವು.