MLC Election: ಜೂನ್ 3ರಂದು 7 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ
ಜೂನ್ 14ರಂದು ತೆರವಾಗಲಿರುವ 7 ವಿಧಾನ ಪರಿಷತ್ ಸ್ಥಾನಗಳಿಗೆ (Karnataka Legislative Council) ಜೂನ್ 3ರಂದು ಚುನಾವಣೆ ನಡೆಯಲಿದೆ. ಈ ಸಂಬಂಧ ಚುನಾವಣಾ ಆಯೋಗದಿಂದ (Electiopn Commission) ದಿನಾಂಕ ಘೋಷಣೆಯಾಗಿದೆ.
ಲಕ್ಷ್ಮಣ್ ಸವದಿ, ಆರ್ ಬಿ ತಿಮ್ಮಾಪುರ, ಅಲ್ಲಮ ವೀರಭದ್ರಪ್ಪ, ಹೆಚ್ ಎಂ ರಮೇಶ್ ಗೌಡ, ವೀಣಾ ಅಚ್ಚಯ್ಯ, ನಾಯಣಸ್ಬಾಮಿ, ಲೆಹರ್ ಸಿಂಗ್ ಸ್ಥಾನಗಳು ಜೂನ್ 14 ರಂದು ತೆರವಾಗಲಿವೆ.
2/ 8
ಮೇ17 ರಿಂದ 24ರವರೆಗೂ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮೇ 27ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್ 3ರಂದೇ ಫಲಿತಾಂಶ ಪ್ರಕಟವಾಗಲಿದೆ.
3/ 8
ಜೂನ್ 3 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಸಂಜೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.
4/ 8
ಈಗಾಗಲೇ ಬಿಜೆಪಿ ವಾಯುವ್ಯ ಕ್ಷೇತ್ರದಿಂದ ಅರುಣ್ ಶಹಾಪುರ ಮತ್ತು ವಾಯುವ್ಯ ಪದವೀಧರ ಕ್ಷೇತ್ರದಿಂದ ಹನುಮಂತ ನಿರಾಣಿ ಮತ್ತು ದಕ್ಷಿಣ ಪದವೀಧರ ಕ್ಷೇತ್ರದಿಂದ ಎಂ.ವಿ.ರಾಜಶೇಖರ್ ಅವರೇ ಅಭ್ಯರ್ಥಿಗಳೆಂದು ಘೋಷಣೆ ಮಾಡಲಾಗಿದೆ.
5/ 8
ದಕ್ಷಿಣ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಎಂಎಲ್ ಸಿ ಗೋ ಮಧುಸೂದನ್ ಇಚ್ಛೆ ವ್ಯಕ್ತಪಡಿಸಿದ್ದರು. ಆದ್ರೆ ಕೊನೆ ಗಳಿಗೆಯಲ್ಲಿ ಟಿಕೆಟ್ ತಪ್ಪಿದ್ದು, ಎಂ.ವಿ.ರಾಜಶೇಖರ್ ಅವರ ಪಾಲಾಗಿದೆ.
6/ 8
ಇತ್ತ ಜೆಡಿಎಸ್ ತೊರೆದು ಬಿಜೆಪಿ ಸೇರಿರುವ ಮಾಜಿ ಸ್ಪೀಕರ್ ಬಸವರಾಜ್ ಹೊರಟ್ಟಿ ಅವರನ್ನ ಪಶ್ಚಿಮ ಪದವೀಧರ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ. ಆದ್ರೆ ಈ ಬಗ್ಗೆ ಯಾವುದೇ ಅಂತಿಮ ಪ್ರಕಟನೆ ಹೊರ ಬಿದ್ದಿಲ್ಲ.
7/ 8
ಬಸವರಾಜ್ ಹೊರಟ್ಟಿ ಅವರಿಗೆ ಟಿಕೆಟ್ ನೀಡುವ ನಿರ್ಧಾರವನ್ನು ಮೋಹನ್ ಲಿಂಬೆಕಾಯಿ ವಿರೋಧಿಸಿದ್ದು, ತಮಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
8/ 8
ಇನ್ನೂ ವಾಯವ ಕ್ಷೇತ್ರದಿಂದ ಅರುಣ್ ಶಹಪುರ ಅವರಿಗೆ ಟಿಕೆಟ್ ನೀಡಿದ್ದಕ್ಕೆ ಬೆಳಗಾವಿ ರಾಜಕಾರಣದಲ್ಲಿ ಅಸಮಾಧಾನದ ಹೊಗೆ ಕಾಣಿಸುತ್ತಿದೆ. ಪಕ್ಷೇತರ ಅಭ್ಯರ್ಥಿಯಾಗಿ ಡಾ.ಪ್ರಭಾಕರ್ ಕೋರೆ ಪುತ್ರಿ ಸ್ಪರ್ಧಿಸುವ ಸಾಧ್ಯತೆಗಳು ದಟ್ಟವಾಗಿವೆ.