ಮಲೆನಾಡು ಮತ್ತು ಕರಾವಳಿಯಲ್ಲಿ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಕೊಡಗಿನಲ್ಲಿ ಮಳೆಯಿಂದ ಗುಡ್ಡಗಳು ಕುಸಿದು, ಮನೆಯೊಳಗೆ ನೀರು ನುಗ್ಗಿ ಅವಾಂತರಗಳೇ ಸೃಷ್ಟಿಯಾಗಿವೆ. ತ್ರಿವೇಣಿ ಸಂಗಮವೂ ಭರ್ತಿಯಾಗಿದ್ದು, ಕೊಡಗಿನಲ್ಲಿ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕೊಡಗಿನ ನಾಪೋಕ್ಲು, ಭಾಗಮಂಡಲ, ತಲಕಾವೇರಿ, ಮಡಿಕೇರಿಯಲ್ಲಿ ಉತ್ತಮ ಮಳೆಯಾಗಿದೆ. ಕಾವೇರಿ ನದಿ ತುಂಬಿ ಹರಿಯುತ್ತಿದೆ. ಹಲವೆಡೆ ಗುಡ್ಡ ಕುಸಿದು, ಊರುಗಳ ನಡುವೆ ಸಂಪರ್ಕವೂ ಕಡಿತಗೊಂಡಿದೆ. ಭಾಗಮಂಡಲ-ತಲಕಾವೇರಿ ಮಧ್ಯೆ ಭೂಕುಸಿತ ಉಂಟಾಗಿದ್ದು, ಚೆರಂಗಲ ಗ್ರಾಮದ ಜನರಿಗೆ ಆತಂಕ ಶುರುವಾಗಿದೆ. ಲಕ್ಷ್ಮಣ ತೀರ್ಥ ನದಿಯೂ ತುಂಬಿ ಹರಿಯುತ್ತಿದೆ. ತಲಕಾವೇರಿ-ಭಾಗಮಂಡಲ ಬಳಿ ಉಂಟಾದ ಭೂಕುಸಿತದ ಸ್ಥಳಕ್ಕೆ ಕೊಡಗು ಜಿಲ್ಲಾಧಿಕಾರಿ ಆ್ಯನೀಸ್ ಕಣ್ಮಣಿ ಮತ್ತು ಎಸ್ಪಿ ಕ್ಷಮಾ ಮಿಶ್ರಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಾಗಮಂಡಲ ನಾಪೋಕ್ಲು ರಸ್ತೆಯಲ್ಲಿ ಮೇಲೆ ನೀರು ಹರಿಯುತ್ತಿದ್ದು, ಬಾಗಮಂಡಲ ನಾಪೋಕ್ಲು ರಸ್ತೆ ಸಂಪರ್ಕ ಕಡಿತವಾಗಿದೆ. ತಲಕಾವೇರಿ ಬಾಗಮಂಡಲ ಸುತ್ತಮುತ್ತ ಭಾರೀ ಮಳೆಯಾಗಿದೆ. ಹೀಗಾಗಿ, ಕಾವೇರಿ ನದಿ ತುಂಬಿ ಹರಿಯುತ್ತಿದ್ದು, ಬಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ಅಲ್ಲದೆ ಕೊಡಗಿನಲ್ಲಿ ಭಾರೀ ಮಳೆ ಕೊಡಗಿನಲ್ಲಿ ಭಾರೀ ಮಳೆ