ಬಸ್ನಲ್ಲಿ ಹಿಂದೂ ಯುವತಿ ಜೊತೆ ಕುಳಿತಿದ್ದಕ್ಕೆ 20 ವರ್ಷದ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಿಂದೂ ಸಂಘಟನೆಯೊಂದರ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
2/ 7
ಸೈಯ್ಯದ್ ರಾಶಿಮ್ ಉಮ್ಮರ್ ಹಲ್ಲೆಗೊಳಗಾದ ವಿದ್ಯಾರ್ಥಿ. ಸೈಯದ್ ರಾಶಿಮ್ ಕಾರ್ಕಳದ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ನವೆಂಬರ್ 24ರಂದು ಪ್ರಯಾಣದ ವೇಳೆ ಹಿಂದೂ ಯುವತಿ ಪಕ್ಕ ಕುಳಿತಿದ್ದ ಎನ್ನಲಾಗಿದೆ.
3/ 7
ನಂತೂರ್ನಲ್ಲಿ ರಾಶಿಮ್ನನ್ನ ಬಸ್ನಿಂದ ಹೊರಕ್ಕೆ ಎಳೆದು ಥಳಿಸಿರುವ ಆರೋಪ ಕೇಳಿ ಬಂದಿದೆ. ಈ ವೇಳೆ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸರು ವಿದ್ಯಾರ್ಥಿಯನ್ನು ರಕ್ಷಣೆ ಮಾಡಿದ್ದಾರೆ.
4/ 7
ಹಲ್ಲೆ ಸಂಬಂಧ ವಿದ್ಯಾರ್ಥಿ ರಾಶಿಮ್ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಸ್ನಿಂದ ಕೆಳಕ್ಕೆ ಎಳೆದು ಕೊಲೆ ಬೆದರಿಕೆ ಹಾಕಲಾಗಿದೆ. ಹಲ್ಲೆ ನಡೆಸಿರೋದನ್ನ ಯಾರಿಗಾದ್ರೂ ಹೇಳಿದ್ರೆ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
5/ 7
ಇನ್ನು ಹಲ್ಲೆಗೆ ಸಂಬಂಧಿಸಿದಂತೆ ಇಮ್ರಾನ್ ಖಾನ್ ಎಂಬವರು ಟ್ವೀಟ್ ಮಾಡಿ ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಮಾಹಿತಿ ನೀಡಿದ್ದರು.
6/ 7
ಯುವತಿ ಜೊತೆ ಬಸ್ನಲ್ಲಿ ಪ್ರಯಾಣಿಸುತ್ತಿರುವಾಗ ಭಜರಂಗದಳದ ಕಾರ್ಯಕರ್ತರು ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದರು.
7/ 7
ಇಮ್ರಾನ್ ಖಾನ್ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಅಲೋಕ್ ಕುಮಾರ್, ಘಟನೆ ಸಂಬಂಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.