Karnataka Rains Today ಬೆಂಗಳೂರು(ಸೆ.30): ಬಂಗಾಳ ಕೊಲ್ಲಿಯಲ್ಲಿ(Bay of Bengal) ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ದೇಶದ ಹಲವೆಡೆ ಕಳೆದ ಕೆಲ ದಿನಗಳಿಂದ ಭಾರೀ ಮಳೆ(Rainfall)ಯಾಗುತ್ತಿದೆ. ಗುಲಾಬ್ ಚಂಡಮಾರುತದ(Cyclone Gulab) ಪ್ರಭಾವದಿಂದಾಗಿ ಒಡಿಶಾ ಮತ್ತು ಆಂಧ್ರ ಪ್ರದೇಶದಲ್ಲಿ ಅಧಿಕ ಮಳೆಯಾಗಿದೆ. ಗುಲಾಬ್ ದುರ್ಬಲಗೊಂಡ ಬಳಿಕ ಇಂದು ಶಾಹೀನ್ ಚಂಡಮಾರುತ(Cyclone Shaheen) ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಾಹಿತಿ ನೀಡಿದೆ. ಹೀಗಾಗಿ ಕರ್ನಾಟಕದಲ್ಲಿ(Karnataka Rains) ಇಂದಿನಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಶಾಹೀನ್ ಚಂಡಮಾರುತ ಇಂದು ಅರಬ್ಬೀ ಸಮುದ್ರಕ್ಕೆ ಅಪ್ಪಳಿಸಲಿದ್ದು, ರಾಜ್ಯದ ಮೇಲೆ ಹೆಚ್ಚಿನ ಪ್ರಭಾವ ಬೀರಲಿದೆ ಎಂದು ಅಂದಾಜಿಸಲಾಗಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ(NIK) ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಇಂದು ಆರೆಂಜ್ ಅಲರ್ಟ್(Orange Alert) ಘೋಷಿಸಲಾಗಿದೆ. ಅಂತೆಯೇ ಕರಾವಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್(Yellow Alert) ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Gold Rate on September 30 2021: ನಿನ್ನೆ ಇಳಿಕೆಯಾಗಿದ್ದ ಚಿನ್ನದ ಬೆಲೆ ಇಂದು ಮತ್ತೆ ಏರಿಕೆ ಕಂಡಿದೆ. ಕಳೆದ ಕೆಲ ದಿನಗಳಿಂದ ಬಂಗಾರದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಮತ್ತೆ ಮೊನ್ನೆ ಏರಿಕೆ ಕಂಡಿದ್ದ ಚಿನ್ನ, ನಿನ್ನೆ ಇಳಿಕೆಯಾಗಿತ್ತು. ಇಂದು ಮತ್ತೆ ಕೊಂಚ ಏರಿಕೆ ಕಾಣುವ ಮೂಲಕ ಆಭರಣ ಪ್ರಿಯರಿಗೆ ಶಾಕ್ ಕೊಟ್ಟಿದೆ. ನಿನ್ನೆ 10 ಗ್ರಾಂ ಚಿನ್ನಕ್ಕೆ 240 ರೂಪಾಯಿ ಇಳಿಕೆ ಕಂಡಿತ್ತು. ಇಂದು 10 ಗ್ರಾಂ ಚಿನ್ನಕ್ಕೆ 60 ರೂಪಾಯಿ ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 45,040 ರೂ. ಇತ್ತು. ಇಂದು 10 ಗ್ರಾಂ ಚಿನ್ನದ ಬೆಲೆ 45,100 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆಯೂ ಕೊಂಚ ಹೆಚ್ಚಾಗಿದೆ. ನಿನ್ನೆ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 46,040 ರೂ. ಇತ್ತು. ಇಂದು 46,100 ರೂಪಾಯಿ ಆಗಿದೆ.
ಬೆಂಗಳೂರು (ಸೆಪ್ಟೆಂಬರ್ 30); ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Banglore) ಕಳೆದ ಹಲವು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ (Petrol-Diesel Price) ಯಾವುದೇ ಬದಲಾವಣೆ ಇರಲಿಲ್ಲ. ಆದರೆ, ಇಂದು ಮತ್ತೆ ಪೆಟ್ರೋಲ್ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. 1 ಲೀಟರ್ ಪೆಟ್ರೋಲ್ ಬೆಲೆಯಲ್ಲಿ 22 ಪೈಸೆ ಏರಿಕೆ ಕಂಡು ಬಂದಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Banglore) ಪೆಟ್ರೋಲ್ ಬೆಲೆ 104.92 ರೂ. ಆಗಿದೆ. ಡೀಸಲ್ ಯಥಾಸ್ಥಿತಿ ಕಾಯ್ದುಕೊಂಡಿದೆ. ಇನ್ನೂ ತೆರಿಗೆಯಲ್ಲಿನ (Tax) ವ್ಯತ್ಯಾಸ ಮತ್ತು ಇನ್ನಿತರೆ ಕಾರಣಗಳಿಂದಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಇಳಿಕೆ ಕಂಡು ಬಂದಿದ್ದರೆ, ಬಹುಪಾಲು ಜಿಲ್ಲೆಗಳಲ್ಲಿ ಮತ್ತೆ ಕನಿಷ್ಟ 20 ರಿಂದ 30 ಪೈಸೆಯಷ್ಟು ತೈಲ ಬೆಲೆಯನ್ನು ಏರಿಸಲಾಗಿದೆ.
ಪಟಿಯಾಲ (ಸೆಪ್ಟೆಂಬರ್ 30); ಪಂಜಾಬ್ ರಾಜ್ಯದ ವಿಧಾನಸಭೆ ಚುನಾವಣೆ (Punjab Assembly Election) ಸಮೀಪವಾಗುತ್ತಿರುವ ಹೊತ್ತಿನಲ್ಲೇ ಪಂಜಾಬ್ ಕಾಂಗ್ರೆಸ್ನಲ್ಲಿ (Punjab Congress) ಆಂತರಿಕ ಸಮರ ತಾರಕಕ್ಕೇರಿದ್ದು, ಮಾಜಿ ಕ್ರಿಕೆಟಿಗ ಮತ್ತು ಪಂಜಾಬ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು (Navjot Singh Sidhu) ರಾಜೀನಾಮೆ ಸದ್ಯಕ್ಕೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕಾಂಗ್ರೆಸ್ ನಾಯಕರು ಸಿಧು ಮನವರಿಕೆ ಮಾಡಲು ಎಷ್ಟು ಪ್ರಯತ್ನಿಸಿದರೂ ಫಲ ನೀಡುತ್ತಿಲ್ಲ.ಇನ್ನೂ ಪಂಜಾಬ್ ಮುಖ್ಯಮಂತ್ರಿ ಚರಣಜೀತ್ ಸಿಂಗ್ ಚನ್ನಿ ಬುಧವಾರ ನವಜೋತ್ ಸಿಂಗ್ ಸಿಧು ಅವರನ್ನು ಭೇಟಿಯಾಗಿ ಮಾತುಕತೆಯ ಮೂಲಕ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಿದ್ದರು. ಪಟಿಯಾಲದ ಯಾದವಿಂದ್ರ ಎನ್ಕ್ಲೇವ್ನಲ್ಲಿರುವ ಸಿಧು ಅವರ ಪೋಷಕರ ಮನೆಗೆ ಪ್ರವಾಸ ಮಾಡಬೇಕಿತ್ತು. ಆದರೆ ಸಿಎಂ ಚನ್ನಿ ತಮ್ಮ ಪ್ರವಾಸವನ್ನು ಮತ್ತು ಸಿಧು ಮನವರಿಕೆ ಮಾಡುವ ಪ್ರಯತ್ನವನ್ನು ಕೈಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.