ಕೋವಿಡ್ - 19 ಹೊಸ ಸೋಂಕಿತರ ಸಂಖ್ಯೆ ದೇಶದಲ್ಲಿ ಸ್ವಲ್ಪ ಕಡಿಮೆ ಎನಿಸಿದರೂ ಈಗಲೂ ಸೋಂಕಿನಿಂದ ಪ್ರತಿನಿತ್ಯ ಹಲವರು ಸಾಯುತ್ತಲೇ ಇದ್ದಾರೆ. ಅಲ್ಲದೆ, ಮಕ್ಕಳಿಗೂ ಸೋಂಕು ಹೆಚ್ಚಾಗುತ್ತಿದೆ. ಈ ವರ್ಷದ ಮಾರ್ಚ್ನಿಂದ ಕೋವಿಡ್ - 19(COVID-19) ಎರಡನೇ ಅಲೆ ಉಲ್ಬಣಗೊಂಡಾಗಿನಿಂದ ಒಟ್ಟಾರೆ ಸಕ್ರಿಯ ಪ್ರಕರಣಗಳಲ್ಲಿ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಕೋವಿಡ್ - ಪಾಸಿಟಿವ್(COVID positive) ಸ್ಥಿರವಾದ ಹೆಚ್ಚಳ ಕಂಡುಬಂದಿದೆ.
Karnataka Rains Today( ಸೆ.14)ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮುಂಗಾರು ಪ್ರಭಾವ ಹೆಚ್ಚಾಗಿರುವುದರಿಂದ ರಾಜ್ಯದ ಕೆಲವೆಡೆ ಭಾರೀ ಮಳೆಯಾಗುವುದಾಗಿ(Rainfall) ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಈ ಹಿನ್ನಲೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರವರೆಗೆ ಯೆಲ್ಲೋ ಅಲರ್ಟ್ (Yellow Alert)ಘೋಷಣೆ ಮಾಡಲಾಗಿದೆ. ಇನ್ನು ಮೂರರಿಂದ ನಾಲ್ಕು ದಿನಗಳವರೆಗೂ ರಾಜ್ಯದ ಹಲವೆಡೆ ಮಳೆ ಹೆಚ್ಚಾಗಲಿದೆ ಎಂದು ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತ ತೀವ್ರವಾಗಲಿದ್ದು, ಇನ್ನೆರಡು ದಿನಗಳಲ್ಲಿ ಉತ್ತರ ಹಾಗೂ ನೈಋತ್ಯ ಭಾಗದೆಡೆಗೆ ಮಾರುತಗಳು ಚಲಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Gold Rate on September 14 2021: ಕಳೆದ 2 ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ಬೆಲೆ ಇಂದು ಇಳಿಕೆಯಾಗಿದೆ. ಗೌರಿ-ಗಣೇಶ ಹಬ್ಬದ ಸಮಯದಲ್ಲಿ ಇಳಿಕೆ ಕಂಡಿದ್ದ ಚಿನ್ನ ಬಳಿಕ ಏರಿಕೆಯಾಗಿತ್ತು. ಎರಡು ದಿನ ಇದ್ದಷ್ಟೇ ಇದ್ದ ಬಂಗಾರ ಇಂದು ಕಡಿಮೆಯಾಗಿದ್ದು, ಆಭರಣ ಪ್ರಿಯರಿಗೆ ಖುಷಿ ನೀಡಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,070 ರೂ. ಇತ್ತು. ಇಂದು 46,010 ರೂಪಾಯಿಗೆ ಇಳಿಕೆಯಾಗಿದೆ. ಅದೇ ರೀತಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆಯೂ ಕಡಿಮೆಯಾಗಿದೆ. ನಿನ್ನೆ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 47,070 ರೂ. ಇತ್ತು. ಇಂದು 47,010 ರೂಪಾಯಿ ಆಗಿದೆ.
ನವದೆಹಲಿ, ಸೆ. 14: ಲಸಿಕೆ ವಿಚಾರದಲ್ಲಿ ಭಾರತವನ್ನ ಮೀರಿಸುವ ದೇಶ ಯಾವುದೂ ಇಲ್ಲ ಎಂದು ಹಿಂದೆ ಹಲವು ಹೇಳಿದ್ದರು. ಅದು ಅತಿಶಯೋಕ್ತ ಮಾತಲ್ಲ ಎಂಬುದು ಸಾಬೀತಾಗಿದೆ. ಭಾರತ ಗಣನೀಯ ವೇಗದಲ್ಲಿ ಲಸಿಕಾ ಯೋಜನೆ ನಡೆಸಿದೆ. ಕಳೆದ 10 ಕೋಟಿ ಲಸಿಕೆಗಳನ್ನ ಭಾರತ ಕೇವಲ 13 ದಿನಗಳಲ್ಲಿ ನೀಡಿ ಸೈ ಎನಿಸಿದೆ. ಭಾರತದಲ್ಲಿ ಜನರಿಗೆ ಈವರೆಗೆ ನೀಡಲಾಗಿರುವ ಲಸಿಕೆ ಡೋಸ್ಗಳ ಸಂಖ್ಯೆ 75 ಕೋಟಿ ಗಡಿ ಮುಟ್ಟಿದೆ ಎಂದು ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಹೇಳಿದ್ಧಾರೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತದಲ್ಲಿ ಲಸಿಕಾ ಯೋಜನೆಗೆ ಹೊಸ ಆಯಾಮ ಸಿಕ್ಕಿದೆ ಎಂದು ಅಭಿಪ್ರಾಯಪಟ್ಟ ಅವರು, “ಭಾರತಕ್ಕೆ ಅಭಿನಂದನೆ.. ದೇಶದ 75ನೇ ಸ್ವಾತಂತ್ರ್ಯೋತ್ಸವದ ವೇಳೆ 75 ಕೋಟಿ ಲಸಿಕೆಗಳನ್ನ ಹಾಕಲಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.
ಇಂದು ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 98.96 ರೂ ಇದ್ದರೆ ಡೀಸೆಲ್ ಬೆಲೆ 93.26 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಅದರಂತೆ ಹೈದ್ರಾಬಾದ್ನಲ್ಲಿ ಪೆಟ್ರೋಲ್ ಬೆಲೆ 87.24 ರೂ ಆಗಿದ್ದರೆ, ಡೀಸೆಲ್ ಬೆಲೆ 80.21 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇನ್ನೂ ನೋಡ್ಡಾದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 98.52 ರೂ ಆಗಿದ್ದರೆ, ದೆಹಲಿಯಲ್ಲಿ 101.62 ರೂ ಮತ್ತು ಮಹಾರಾಷ್ಟ್ರದಲ್ಲಿ 107.26 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇನ್ನೂ ರಾಜಸ್ಥಾನದ ಜೈಪುರದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 108.56 ರೂ ಇದೆ. ಇದು ದೇಶದಲ್ಲೇ ಅತ್ಯಂತ ಹೆಚ್ಚಿನ ಬೆಲೆ ಎಂದು ಗುರುತಿಸಿಕೊಂಡಿದೆ.