Karnataka Rains Today:ಬೆಂಗಳೂರು(ಸೆ.18):ಮುಂಗಾರು(Monsoon) ಪ್ರಭಾವದಿಂದಾಗಿ ಶನಿವಾರದಿಂದ ಕೆಲವು ರಾಜ್ಯಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದ್ದು, ಪೂರ್ವ ಭಾರತದಲ್ಲಿ ಅಧಿಕ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿತ್ತು, ಆದರೆ ರಾಜ್ಯದ ಮಲೆನಾಡು ಮತ್ತು ಕರಾವಳಿ (Coastal)ಭಾಗಗಳಲ್ಲಿ ನಿರೀಕ್ಷೆಯಂತೆ ಮಳೆಯಾಗಿಲ್ಲ. ಆದರೆ ಇಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು(Karnataka Monsoon 2021), ಸೆಪ್ಟೆಂಬರ್ ತಿಂಗಳ ಆರಂಭದಿಂದಲೂ ಎಡೆಬಿಡದೆ ಮಳೆ ಸುರಿಯುತ್ತಿದೆ. ಆದರೆ ರಾಜ್ಯದಲ್ಲಿ ಕಳೆದ 15 ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಶನಿವಾರ ಮಳೆಯ ಆರ್ಭಟ ಕಡಿಮೆಯಾಗಿತ್ತು. ಸೆಪ್ಟೆಂಬರ್ ಅಂತ್ಯದವರೆಗೂ ವಾಯವ್ಯ ಭಾರತದಲ್ಲಿ ಮುಂಗಾರು ನಿಲ್ಲುವುದಿಲ್ಲ. ಇದಕ್ಕೆ ಪರಿಸ್ಥಿತಿ ಅನುಕೂಲಕರವಾಗಿಲ್ಲ ಎಂದು ಅವರು ಹೇಳಿದ್ದಾರೆ. ಸೆಪ್ಟೆಂಬರ್ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ. ಇದರೊಂದಿಗೆ ಬಂಗಾಳಕೊಲ್ಲಿಯಲ್ಲಿ ಸತತ ಎರಡು ಚಂಡಮಾರುತ ಸೃಷ್ಟಿಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರು(ಸೆ.19): ಇಂದು ದಾವಣಗೆರೆಯಲ್ಲಿ(Davanagere) ಪೂರ್ಣ ಪ್ರಮಾಣದ ಬಿಜೆಪಿ ರಾಜ್ಯ ಕಾರ್ಯಕಾರಿಣಿ(BJP Core committee Meeting) ಸಭೆ ನಡೆಯಲಿದ್ದು, ಸುಮಾರು 574 ಅಪೇಕ್ಷಿತರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಮಾರು 1 ವರ್ಷದ ಬಳಿಕ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ಇಂದು ಬೆಳಗ್ಗೆ ದಾವಣಗೆರೆಯ ತ್ರಿಶೂಲ್ ಕಲಾ ಭವನದಲ್ಲಿ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಭೆ ನಡೆಯಲಿದೆ. ರಾಜ್ಯದ ಪದಾಧಿಕಾರಿಗಳು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಜಿಲ್ಲಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಸಂಘಟನಾ ಕಾರ್ಯದರ್ಶಿಗಳು, ಸಹ ಸಂಘಟನಾ ಕಾರ್ಯದರ್ಶಿಗಳು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 45,390 ರೂ. ಇತ್ತು. ಇಂದೂ ಸಹ ಅದೇ ಬೆಲೆಯನ್ನು ಕಾಯ್ದುಕೊಡಿದೆ. ಅದೇ ರೀತಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಯಾವುದೇ ವ್ಯತ್ಯಾಸವಾಗಿಲ್ಲ. ನಿನ್ನೆ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 46,390 ರೂ. ಇತ್ತು. ಇಂದೂ ಸಹ ಅದೇ ಬೆಲೆ ಇದೆ. ಮೊನ್ನೆ 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ 550 ರೂಪಾಯಿ ಇಳಿಕೆ ಕಂಡಿತ್ತು. ನಿನ್ನೆ 10 ಗ್ರಾಂ ಚಿನ್ನಕ್ಕೆ 390 ರೂಪಾಯಿ ಕಡಿಮೆಯಾಗಿತ್ತು.
ಬೆಂಗಳೂರು (ಸೆಪ್ಟೆಂಬರ್ 19); ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ (Petrol and Diesel Prices) ಇಂದು ಸ್ವಲ್ಪ ಮಟ್ಟಿನ ಏರಿಳಿತವಾಗಿದೆ. ಆದರೆ ಬೆಂಗಳೂರು ನಗರದಲ್ಲಿ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಬೆಲೆಯಲ್ಲಿ ಏರುಪೇರಾಗಿದೆ. ಭಾರತದಲ್ಲಿ ಪೆಟ್ರೋಲ್ ದರಗಳನ್ನು ಪ್ರತಿದಿನ ಪರಿಷ್ಕರಿಸಲಾಗುತ್ತದೆ. ಪ್ರತಿದಿನ ಬೆಳಿಗ್ಗೆ 06:00 ಗಂಟೆಗೆ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜಾಗತಿಕ ತೈಲ ಬೆಲೆಯಲ್ಲಿ ಒಂದು ನಿಮಿಷದ ವ್ಯತ್ಯಾಸವನ್ನು ಇಂಧನ ಬಳಕೆದಾರರು ಮತ್ತು ವಿತರಕರಿಗೆ ರವಾನಿಸಬಹುದು ಎಂದು ಇದು ಖಚಿತಪಡಿಸುತ್ತದೆ. ಇಂಧನದ ಬೆಲೆಯು ಅಬಕಾರಿ ಸುಂಕ, ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮತ್ತು ಡೀಲರ್ ಕಮಿಷನ್ ಅನ್ನು ಒಳಗೊಂಡಿದೆ. ವ್ಯಾಟ್ ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ.
ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಇಂದಿನಿಂದ 2 ದಿನಗಳ ಕಾಲ ವಿದ್ಯುತ್ ವ್ಯತ್ಯಯವಾಗಲಿದ್ದು(Power Cut), ಸಾರ್ವಜನಿಕರು ಸಹಕರಿಸಬೇಕೆಂದು ಎಂದು ಬೆಸ್ಕಾಂ(BESCOM) ಮನವಿ ಮಾಡಿಕೊಂಡಿದೆ. ನಿರ್ವಹಣಾ ಕಾರ್ಯ ಮತ್ತು ಕೇಬಲ್ ಅಳವಡಿಕೆ ಕೆಲಸ ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದ ವಿವಿಧ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಅಂದರೆ 19 ಮತ್ತು 20ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.ಇಂದು ಮತ್ತು ನಾಳೆ ಯಾವ್ಯಾವ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ತಲೆದೋರಲಿದೆ ಎಂಬ ಪಟ್ಟಿಯನ್ನು ಸಹ ನೀಡಿದೆ. ಇಂದು ಬೆಲ್ಮಾರ್ ಬಡಾವಣೆ, ಎಚ್ಎಂಟಿ ಬಡಾವಣೆ, ವಿನಾಯಕ ನಗರ, ಜಾಲಹಳ್ಳಿ ಅಡ್ಡರಸ್ತೆ, ಶೋಭಾ ಅಪಾರ್ಟ್ಮೆಂಟ್ಸ್, ಗೃಹಲಕ್ಷ್ಮಿ ಬಡಾವಣೆ, ಶಿವಪುರ, ಪೀಣ್ಯ ಎರಡನೇ ಹಂತ ಹಾಗೂ ತಿಗಳರ ಪಾಳ್ಯ ಮುಖ್ಯರಸ್ತೆ, ರುಕ್ಷ್ಮಿಣಿ ನಗರ ಹಾಗೂ ಸುತ್ತ–ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆಯಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.