Mukhyamantri Chandru: ಕಾಂಗ್ರೆಸ್ ತೊರೆದಿದ್ಯಾಕೆ ಮುಖ್ಯಮಂತ್ರಿ ಚಂದ್ರು?
ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಲ್ಲಿಸಿದ್ದಾರೆ.
ದೇಶದಲ್ಲೇ ಸುದೀರ್ಘ ಇತಿಹಾಸವಿರುವ ಕಾಂಗ್ರೆಸ್ ಪಕ್ಷಕ್ಕೆ ನಾನು ವ್ಯಾಪಕ ನೆಲೆಯಲ್ಲಿ ಜನಸೇವೆ ಮಾಡುವ ಆಶಯದಿಂದ ಸೇರ್ಪಡೆಗೊಂಡೆ ಎಂಬ ವಿಷಯವನ್ನು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
2/ 8
ಪಕ್ಷಕ್ಕೆ ಸೇರಿದಾಗಿನಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂಬ ತೃಪ್ತಿ ಇದೆ. ಸದ್ಯ ಪಕ್ಷದ ಪ್ರಾಥಮಿಕ ಸದತ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.
3/ 8
ನನ್ನ ಮೇಲೆ ವಿಶ್ವಾಸವಿಟ್ಟು ಪಕ್ಷದ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಪ್ರಕಟಿಸಿರುವ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಪ್ರಮೇಯವೇ ಉದ್ಧವಿಸುವದಿಲ್ಲ ಎಂದು ಪತ್ರದಲ್ಲಿ ಬರೆದಿದ್ದಾರೆ.
4/ 8
ಮುಖ್ಯಮಂತ್ರಿ ಚಂದ್ರು ಅವರು ರಾಜ್ಯಸಭಾ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದ್ರೆ ಕೊನೆ ಗಳಿಗೆಯಲ್ಲಿ ಮುಖ್ಯಮಂತ್ರಿ ಚಂದ್ರು ಅವರಿಗೆ ಟಿಕೆಟ್ ತಪ್ಪಿತ್ತು.
5/ 8
ಟೆಕೆಟ್ ತಪ್ಪಿದ ಬೆನ್ನಲ್ಲೇ ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದರೂ ಗುರುತಿಸಿಲ್ಲ ಎಂದು ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದ್ದರು.
6/ 8
ಇದೀಗ ರಾಜೀನಾಮೆ ನೀಡುವ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ. ರಾಜೀನಾಮೆ ಬಳಿಕ ಕಾಂಗ್ರೆಸ್ ನಾಯಕರ ಬಗ್ಗೆಯೂ ಬೇಸರ ಹೊರ ಹಾಕಿದ್ದಾರೆ.
7/ 8
ಮುಖ್ಯಮಂತ್ರಿ ಚಂದ್ರು ರಾಜೀನಾಮೆ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಡಿಸಿಎಂ ಪರಮೇಶ್ವರ್, ಇದು ಅವರ ವೈಯಕ್ತಿಕ ನಿರ್ಧಾರ. ನಾವು ಅವರ ಬಳಿ ಮನವಿ ಮಾಡಬಹುದು ಬಿಟ್ಟು ಬೇರೆನು ಮಾಡೋಕೆ ಸಾಧ್ಯ ಎಂದು ಹೇಳಿದ್ದಾರೆ.
8/ 8
ರಾಜ್ಯಸಭೆ ವಿಚಾರದ ತೀರ್ಮಾನವನ್ನು ಕಾಂಗ್ರೆಸ್ ಅಧ್ಯಕ್ಷರಿಗೆ ಬಿಡುವುದು ನಮ್ಮ ಸಂಪ್ರದಾಯ. ದೇಶದ ಚಿತ್ರಣ ನೋಡಿಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡೋದು ಅಧ್ಯಕ್ಷರಿಗೆ ಬಿಟ್ಟಿದ್ದು. ಅಭ್ಯರ್ಥಿ ಆಯ್ಕೆ ವಿಚಾರವನ್ನು ಕಾಂಗ್ರೆಸ್ ಅಧ್ಯಕ್ಷರಿಗೆ ಬಿಟ್ಟಿದ್ದೇವೆ ಎಂದು ಪರಮೇಶ್ವರ್ ಹೇಳುತ್ತಾರೆ.