Mysore Accident: 10 ಮಂದಿ ಸಾವಿಗೆ ಪ್ರಧಾನಿ ಕಂಬನಿ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

ಮೈಸೂರಿನ ಬಳಿ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬದಲ್ಲಷ್ಟೇ ಅಲ್ಲ, ಇಡೀ ರಾಜ್ಯವೇ ದುಃಖದ ಕಡಲಿನಲ್ಲಿ ಮುಳುಗಿದೆ. ಇದೀಗ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ.

First published:

  • 17

    Mysore Accident: 10 ಮಂದಿ ಸಾವಿಗೆ ಪ್ರಧಾನಿ ಕಂಬನಿ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

    ಕೊಳ್ಳೇಗಾಲ ಹಾಗೂ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಬಳಿ ಇಂದು ಭೀಕರ ಅಪಘಾತ ಸಂಭವಿಸಿತ್ತು. ಖಾಸಗಿ ಬಸ್ ಮತ್ತು ಇನ್ನೋವಾ ಕಾರು ನಡುವೆ ಡಿಕ್ಕಿ ಸಂಭವಿಸಿ,ಒಬ್ಬ ಕಾರು ಚಾಲಕ, ಮಗು ಸೇರಿ ಒಟ್ಟು 10 ಮಂದಿ ಸಾವನ್ನಪ್ಪಿದ್ದರು.

    MORE
    GALLERIES

  • 27

    Mysore Accident: 10 ಮಂದಿ ಸಾವಿಗೆ ಪ್ರಧಾನಿ ಕಂಬನಿ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

    ಇದೀಗ ಇದೀಗ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಿಸಿದ್ದಾರೆ. ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಹಾಗೂ ಗಾಯಾಳುಗಳಿಗೆ 50 ಸಾವಿರ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದಾರೆ.

    MORE
    GALLERIES

  • 37

    Mysore Accident: 10 ಮಂದಿ ಸಾವಿಗೆ ಪ್ರಧಾನಿ ಕಂಬನಿ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

    ಕರ್ನಾಟಕದ ಮೈಸೂರಿನಲ್ಲಿ ಸಂಭವಿಸಿದ ಭೀಕರ ಅಪಘಾತದಿಂದ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ನಾವಿರುತ್ತೇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ ಅಂತ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ.

    MORE
    GALLERIES

  • 47

    Mysore Accident: 10 ಮಂದಿ ಸಾವಿಗೆ ಪ್ರಧಾನಿ ಕಂಬನಿ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

    "ಮೈಸೂರು ಮತ್ತು ಧನಾಬಾದ್‌ನಲ್ಲಿ ಸಂಭವಿಸಿದ ದುರಂತಗಳಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ಪ್ರಧಾನಮಂತ್ರಿಯವರು PMNRF 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಗಾಯಾಳುಗಳಿಗೆ 50,000 ರೂಪಾಯಿಗಳನ್ನು ನೀಡಲಾಗುವುದು" ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದೆ.

    MORE
    GALLERIES

  • 57

    Mysore Accident: 10 ಮಂದಿ ಸಾವಿಗೆ ಪ್ರಧಾನಿ ಕಂಬನಿ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

    ಇನ್ನು ಮೈಸೂರು ಅಪಘಾತದಲ್ಲಿ ಮಕ್ಕಳು ಸೇರಿ 10 ಜನ ಮೃತಪಟ್ಟ ಸುದ್ದಿ ತಿಳಿದು ತೀವ್ರ ನೋವಾಯಿತು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಮೃತರ ಕುಟುಂಬಸ್ಥರಿಗೆ ನನ್ನ ಸಾಂತ್ವನಗಳು ಎಂದು ರಾಷ್ಟ್ರಪತಿ ಮುರ್ಮು ಅವರು ಟ್ವೀಟ್ ಮಾಡಿದ್ದಾರೆ.

    MORE
    GALLERIES

  • 67

    Mysore Accident: 10 ಮಂದಿ ಸಾವಿಗೆ ಪ್ರಧಾನಿ ಕಂಬನಿ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

    ಮತ್ತೊಂದೆಡೆ ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಸಂಬಂಧಪಟ್ಟ ಅಧಿಕಾರಿಗಳು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು.

    MORE
    GALLERIES

  • 77

    Mysore Accident: 10 ಮಂದಿ ಸಾವಿಗೆ ಪ್ರಧಾನಿ ಕಂಬನಿ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

    ಬಳ್ಳಾರಿ ಜಿಲ್ಲೆಯ ಸಂಗನಕಲ್ ಗ್ರಾಮದಿಂದ ಮೇ 27 ರಂದು ಮೂರು ಕುಟುಂಬಗಳ 12 ಸದಸ್ಯರು ಮೈಸೂರು ಪ್ರವಾಸಕ್ಕೆ ರೈಲಿನಲ್ಲಿ ತೆರಳಿದ್ದರು. ಇಂದು ವಾಪಸ್ ಊರಿಗೆ ಹೋಗಲು ರೈಲ್ವೆ ನಿಲ್ದಾಣಕ್ಕೆ ಕಾರಲ್ಲಿ ಹೋಗುವಾಗ ದುರಂತ ಸಂಭವಿಸಿದೆ.

    MORE
    GALLERIES