ಏಪ್ರಿಲ್ 11ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಭಯದಿಂದ ಆರಂಭದಲ್ಲಿ ಪೊಲೀಸರ ಮುಂದೆ ಮಹಿಳೆ ಹೇಳಿಕೆ ದಾಖಲಿಸಲು ಹಿಂದೇಟು ಹಾಕಿದ್ರು ಎನ್ನಲಾಗಿದೆ. (ಸಾಂದರ್ಭಿಕ ಚಿತ್ರ)
2/ 8
ಈ ಘಟನೆ ನಂಜನಗೂಡು ತಾಲೂಕಿನ ದೊಡ್ಡಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆ ಪತಿಯ ಜೊತೆಗೆ ಕುರಿ ಮೇಯಿಸುತ್ತಿದ್ದರು. (ಸಾಂದರ್ಭಿಕ ಚಿತ್ರ)
3/ 8
ಮೂವರು ಕಾಮುಕರು ಮಹಿಳೆಯನ್ನು ಬಲವಂತವಾಗಿ ಎಳೆದೊಯ್ದು ಅತ್ಯಾಚಾರ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ. (ಸಾಂದರ್ಭಿಕ ಚಿತ್ರ)
4/ 8
ಏಪ್ರಿಲ್ 11ರಂದು ಕುರಿ ಮೇಯಿಸಲು ಹೋಗಿದ್ದ ಪತಿ ಹಿಂದಿರುಗಿ ಬಾರದಿದ್ದಾಗ ಆತನನ್ನು ಹುಡುಕಿಕೊಂಡು ಮಹಿಳೆ ಹೋಗಿದ್ದರು. ಈ ವೇಳೆ ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ. (ಸಾಂದರ್ಭಿಕ ಚಿತ್ರ)
5/ 8
ಮಹಿಳೆ ಅಸ್ವಸ್ಥಳಾಗಿ ಬಿದ್ದಿರೋದನ್ನು ಕಂಡು, ಆಕೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. (ಸಾಂದರ್ಭಿಕ ಚಿತ್ರ)
6/ 8
ಈ ಘಟನೆಯಿಂದ ಭಯಗೊಂಡಿದ್ದ ಸಂತ್ರಸ್ತ ಮಹಿಳೆ ತನ್ನ ಮೇಲಾದ ಅತ್ಯಾಚಾರದ ಕುರಿತು ಹೇಳಿಕೆ ನೀಡಲು ನಿರಾಕರಿಸಿದ್ದರು. ಎರಡು ದಿನದ ನಂತರ ಹೇಳಿಕೆ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)
7/ 8
ಪ್ರಕರಣ ಸಂಬಂಧ ದೊಡ್ಡಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂವರ ಪೈಕಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. (ಸಾಂದರ್ಭಿಕ ಚಿತ್ರ)
8/ 8
ತಗಡೂರು ಗ್ರಾಮದ ರಾಜು ಬಂಧಿತ ಆರೋಪಿ ಎನ್ನಲಾಗಿದೆ. ಇನ್ನುಳಿದ ಇಬ್ಬರು ಆರೋಪಿಗಳಾದ ಪುಟ್ಟಣ್ಣ ಮತ್ತು ರವಿ ಪರಾರಿಯಾಗಿದ್ದಾರೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. (ಸಾಂದರ್ಭಿಕ ಚಿತ್ರ)