Mysore Palace: ತಾಜ್ ಮಹಲ್​ ಹಿಂದಿಕ್ಕಿದೆ ಮೈಸೂರು ಅರಮನೆ, ‘ಅಂಬಾ ವಿಲಾಸ’ಕ್ಕೆ ವಿಶ್ವ ಮನ್ನಣೆ

ಮೈಸೂರು ಮಲ್ಲಿಗೆ (Mysore Mallige), ಮೈಸೂರು ಪಾಕ್ (Mysore Pak) ಹಾಗೂ ಮೈಸೂರು ದಸರೆಯಷ್ಟೇ ಮೈಸೂರು ಅರಮನೆಯೂ (Mysore Palace) ವಿಶ್ವವಿಖ್ಯಾತ. ಕರುನಾಡ ನೆಲದಲ್ಲಿ ಕಟ್ಟಲಾದ ಇತ್ತೀಚಿನ ಅರಮನೆ ಎಂಬ ಖ್ಯಾತಿಯೂ ಈ ಅರಮನೆಗಿದೆ. ಕರುನಾಡ ಹೆಮ್ಮೆಯ ರಾಜಮನೆತನಗಳಲ್ಲಿ (Royalhouse) ಮೈಸೂರು ಒಡೆಯರ ವಂಶವೂ ಒಂದು. ಕರ್ನಾಟಕದ ಇಂದಿನ ಸಾಂಸ್ಕೃತಿಕ ರಾಜಧಾನಿ ಮೈಸೂರು ಅರಮನೆಗಳ ನಗರಿ ಎಂದು ಖ್ಯಾತವಾಗಿದ್ದೇ ಒಡೆಯರ ಕಾಲದಲ್ಲಿ. ಭಾರತೀಯ ಸಾಂಪ್ರದಾಯಿಕ ವಾಸ್ತುಶಿಲ್ಪದಿಂದ ಒಡಮೂಡಿದ ಈ ಸುಂದರ ಸೌಧ, ಬ್ರಿಟಿಷರು ಭಾರತದಲ್ಲಿ ಬಲವಾದ ಹಿಡಿತ ಹೊಂದಿದ್ದ ಹಾಗೂ ಆಧುನಿಕತೆಯ ಗಾಳಿ ಬೀಸುತ್ತಿದ್ದ ಕಾಲದಲ್ಲಿ ನಿರ್ಮಾಣವಾದ ಭವ್ಯ ಬಂಗಲೆ ಇದಾಗಿದೆ.

First published: