Photos: ನಿರ್ಮಲಾನಂದನಾಥ ಶ್ರೀಗಳ ಆಶೀರ್ವಾದ ಪಡೆದ ನೂತನ ಸಚಿವರು
ಮೈತ್ರಿ ಸರ್ಕಾರದ ವಿರುದ್ಧ ಬಂಡಾಯವೆದ್ದು, ಉಪಚುನಾವಣೆಯಲ್ಲಿ ಗೆದ್ದ 10 ಜನ ಶಾಸಕರು ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಬಿಎಸ್ ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದು, ನೂತನ ಸಚಿವರಲ್ಲಿ ಹರ್ಷ ಮೂಡಿದೆ. ಇಂದು ರಾಜಭವನದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ, ಭೈರತಿ ಬಸವರಾಜ್, ಎಸ್ಟಿಸೋಮಶೇಖರ್, ಕೆ ಸುಧಾಕರ್, ನಾರಾಯಣಗೌಡ, ಗೋಪಾಲಯ್ಯ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ನಿರ್ಮಲಾನಂದನಾಥ ಶ್ರೀಗಳ ಆಶೀರ್ವಾದ ಪಡೆದರು.