ಕೊಡಗು: ಅವರಿಬ್ಬರು 10 ತಿಂಗಳುಗಳ ಹಿಂದೆಯಷ್ಟೇ ಸಪ್ತಪದಿ ತುಳಿದಿದ್ದರು. ಜೀವನದ ಕೊನೆಯವರೆಗೆ ಜೊತೆಯಾಗಿ ಹೆಜ್ಜೆ ಹಾಕುವುದಾಗಿ ಮದುವೆಯ ಬಂಧನಕ್ಕೆ ಒಳಗಾಗಿದ್ದರು. ಆದರೆ ಮದುವೆಗೆ ವರ್ಷ ತುಂಬುವ ಮೊದಲೇ ಸಾವಿನ ಮನೆ ಸೇರಿದ್ದಾರೆ.
ಪತಿ ಪತ್ನಿ ಇಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಬಿರುನಾಣಿ ಗ್ರಾಮದಲ್ಲಿ ನಡೆದಿದೆ. ಪತಿ ಯುವರಾಜ್ (25), ಪತ್ನಿ ಶಿಲ್ಪಾ (22) ಇಬ್ಬರೂ ನೇಣಿಗೆ ಶರಣಾಗಿದ್ದಾರೆ.
2/ 8
ಮೃತ ಯುವರಾಜ್ ಅರಣ್ಯ ಇಲಾಖೆಯಲ್ಲಿ ಫಾರೆಸ್ಟ್ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ದಂಪತಿ ಬಿರುನಾಣಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. (ಸಾಂದರ್ಭಿಕ ಚಿತ್ರ)
3/ 8
ಪತ್ನಿ ಶಿಲ್ಪಾ ಆತ್ಮಹತ್ಯೆಗೆ ಶರಣಾಗಿದ್ದರು. ನಂತರ ಮನೆಗೆ ಪತಿ ಯುವರಾಜ್ ಬಂದಾಗ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ ಕೂಡಲೇ ಯುವರಾಜ್ ಸಹ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. (ಸಾಂದರ್ಭಿಕ ಚಿತ್ರ)
4/ 8
ಶಿವಮೊಗ್ಗ ಮೂಲದ ದಂಪತಿ ಕಳೆದ 10 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಬಿರುನಾಣಿಯಲ್ಲಿ ಬಾಡಿಗೆಗೆ ವಾಸವಾಗಿದ್ದರು. (ಸಾಂದರ್ಭಿಕ ಚಿತ್ರ)
5/ 8
ಕರ್ತವ್ಯ ಮುಗಿಸಿ ಸಂಜೆ ಮನೆಗೆ ಬಂದಾಗ ಪತ್ನಿ ವೇಲ್ ನಿಂದ ಬಾತ್ ರೂಮ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿ ಮನೆ ಮಾಲೀಕ ಸತ್ಯ ಅವರನ್ನು ಕರೆದು ಮೃತದೇಹವನ್ನು ಇಬ್ಬರು ಸೇರಿ ಇಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)
6/ 8
ಈ ಸಂದರ್ಭ ಸಂಬಂಧಿಕರಿಗೆ ದೂರವಾಣಿ ಕರೆ ಮಾಡಿ ವಿಷಯವನ್ನು ಯುವರಾಜ್ ತಿಳಿಸಿದ್ದಾನೆ. ನಂತರ ಯುವರಾಜ್ ಸಹ ಬಾತ್ ರೂಮ್ ಗೆ ಹೋಗಿ ಪತ್ನಿ ನೇಣು ಬಿಗಿದು ಕೊಂಡಿದ್ದ ವೇಲ್ ನಿಂದ ತಾನು ಆತ್ಮಹತ್ಯೆಗೆ ಶರಣಾಗಿದ್ದಾನೆ. (ಸಾಂದರ್ಭಿಕ ಚಿತ್ರ)
7/ 8
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವವಿವಾಹಿತರು ಹೀಗೆ ದುರಂತ ಅಂತ್ಯ ಕಂಡಿರುವುದು ಎರಡೂ ಕಡೆಯ ಕುಟುಂಬಸ್ಥರಿಗೆ ಆಘಾತ ನೀಡಿದೆ. (ಸಾಂದರ್ಭಿಕ ಚಿತ್ರ)
8/ 8
ವಿಶೇಷ ಸೂಚನೆ: ಆತ್ಮಹತ್ಯೆಯಂತಹ ಸುದ್ದಿಗಳು ನಿಮ್ಮ ಮನಸ್ಸಿಗೆ ಆಘಾತ ಉಂಟು ಮಾಡಿದ್ದರೆ, ಕೂಡಲೇ ಸಂಬಂಧಪಟ್ಟವರನ್ನು ಸಂಪರ್ಕಿಸಿ. ಆತ್ಮಹತ್ಯಾ ಯೋಚನೆಗಳು ಕ್ಷಣಿಕವಾಗಿದ್ದು, ಸಮಾಲೋಚನೆ ಮೂಲಕ ಪರಿಹಾರ ಕಂಡುಕೊಳ್ಳಬಹುದು.