Siddaramaiah: ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ: ಮಾಜಿ ಸಿಎಂ

ಇಂದು ಕೂಡ್ಲಿಗಿಯ ಹೆಲಿಪ್ಯಾಡ್ ಬಳಿ ಮಾಜಿ ಸಿಎಂ ಸಿದ್ದರಾಮಯ್ಯ ಕಾರ್ ಹತ್ತುವ ವೇಳೆ ಆಯತಪ್ಪಿದ್ದರು. ಕೂಡಲೇ ಆಪ್ತರು ಹಿಡಿದುಕೊಂಡಿದ್ದರು. ಇದೀಗ ಸಿದ್ದರಾಮಯ್ಯ ಆರೋಗ್ಯವಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.

First published:

  • 17

    Siddaramaiah: ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ: ಮಾಜಿ ಸಿಎಂ

    ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಹಾಗಾಗಿ ಗಾಬರಿಪಡಬೇಕಿಲ್ಲ ಎಂದು ಹೇಳಿದರು.

    MORE
    GALLERIES

  • 27

    Siddaramaiah: ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ: ಮಾಜಿ ಸಿಎಂ

    ನಿತ್ಯ ಅಡ್ಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದ ಕಾರಿನಲ್ಲಿ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೆ. ಈಗ ಆರಾಮಾಗಿದ್ದೇನೆ

    MORE
    GALLERIES

  • 37

    Siddaramaiah: ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ: ಮಾಜಿ ಸಿಎಂ

    ಇದನ್ನು ಅತಿರಂಜಿತ ರೀತಿಯಲ್ಲಿ ವರದಿ‌ ಮಾಡಿ ಜನ ಗಾಬರಿ ಪಡುವಂತೆ ಮಾಡಬೇಡಿ ಎಂದು ಮಾಧ್ಯಮ ಮಿತ್ರರಲ್ಲಿ ವಿನಂತಿಸಿಕೊಂಡಿದ್ದಾರೆ.

    MORE
    GALLERIES

  • 47

    Siddaramaiah: ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ: ಮಾಜಿ ಸಿಎಂ

    ಬಳ್ಳಾರಿ ಜಿಲ್ಲೆಯ ಕೂಡ್ಲಿಗಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಪಕ್ಷದ ಅಭ್ಯರ್ಥಿ ಡಾ. ಶ್ರೀನಿವಾಸ್ ಅವರನ್ನು ಗರಿಷ್ಠ ಮತಗಳ ಅಂತರದಿಂದ ಗೆಲ್ಲಿಸಿಕೊಡುವಂತೆ ಸಿದ್ದರಾಮಯ್ಯ ಮನವಿ ಮಾಡಿದರು.

    MORE
    GALLERIES

  • 57

    Siddaramaiah: ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ: ಮಾಜಿ ಸಿಎಂ

    ಪಿಎಸ್‌ಐ ನೇಮಕಾತಿಯಲ್ಲಿ ಪ್ರತೀ ಹುದ್ದೆಗೆ 70 - 80 ಲಕ್ಷ ಲಂಚ ನಿಗದಿ ಮಾಡಿ ಕೋಟಿ ಕೋಟಿ ಹಣ ಕೊಳ್ಳೆದ ಶಾಸಕರು, ಸಚಿವರು ಇಂದೂ ಕೂಡ ಹೊರಗಡೆ ನೆಮ್ಮದಿಯಾಗಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

    MORE
    GALLERIES

  • 67

    Siddaramaiah: ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ: ಮಾಜಿ ಸಿಎಂ

    ಪ್ರಾಮಾಣಿಕವಾಗಿ ಪರೀಕ್ಷೆ ಎದುರಿಸಿ ಪಾಸಾದ ಅಭ್ಯರ್ಥಿಗಳ ಸರ್ಕಾರಿ ಉದ್ಯೋಗದ ಕನಸಿಗೆ ಕೊಳ್ಳಿಯಿಟ್ಟು, ಅವರ ಭವಿಷ್ಯವನ್ನು ಬಲಿಪಡೆದ ಬಿಜೆಪಿ ಸರ್ಕಾರದ ಭ್ರಷ್ಟಾಚಾರಗಳ ಕರ್ಮಕಾಂಡವನ್ನು ಮತ ನೀಡುವ ಮುನ್ನ ನೆನಪಿಸಿಕೊಂಡು, ನಿಮ್ಮ ಮಕ್ಕಳ, ಅಣ್ಣ ತಂಗಿಯರ ಉಜ್ವಲ ಭವಿಷ್ಯಕ್ಕಾಗಿ ಕಾಂಗ್ರೆಸನ್ನು ಬೆಂಬಲಿಸಿ ಎಂದು ಮನವಿ ಮಾಡಿಕೊಂಡರು.

    MORE
    GALLERIES

  • 77

    Siddaramaiah: ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ: ಮಾಜಿ ಸಿಎಂ

    ನಂತರ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು, ಪಕ್ಷದ ಅಭ್ಯರ್ಥಿ ಬಸನಗೌಡ ತುರುವೀಹಾಳ ಅವರ ಪರ ಪ್ರಚಾರ ನಡೆಸಿದರು.

    MORE
    GALLERIES