Dakshina Kannada: ಕಲ್ಲು, ಮಣ್ಣು ಸ್ವಚ್ಛಗೊಳಿಸದೇ ಹೊಲಿಗೆ ಹಾಕಿದ್ದ ಆಸ್ಪತ್ರೆಗೆ ನೋಟಿಸ್
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವಿನ ಗಾಯವನ್ನು ಸ್ವಚ್ಛಗೊಳಿಸದೇ ಹೊಲಿಗೆ ಹಾಕಿದ್ದ ಆಸ್ಪತ್ರೆಗೆ ನೋಟಿಸ್ ನೀಡಲಾಗಿದೆ. ಹೊಲಿಗೆ ಹಾಕಿರುವ ಆಸ್ಪತ್ರೆಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಹೇಳಿದ್ದಾರೆ. (ಸಾಂದರ್ಭಿ
ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಈ ಕುರಿತು ಡಾ.ಕಿಶೋರ್ ಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿದ್ದು, ನಾನು ವೈದ್ಯಾಧಿಕಾರಿಗಳ ಜೊತೆ ಮಾತನಾಡಿದ್ದೇನೆ ಎಂದಿದ್ದಾರೆ. (ಸಾಂದರ್ಭಿಕ ಚಿತ್ರ)
2/ 8
ಗಾಯಾಳುವಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವಂತೆ ಸೂಚನೆ ನೀಡಿದ್ದರು. ಆದ್ರೆ ಗಾಯಾಳು ವೈದ್ಯರ ಮಾತು ನಿರ್ಲಕ್ಷ್ಯ ಮಾಡಿದ್ದಾನೆ ಎಂದು ಕಡಬ ವೈದ್ಯರು ಹೇಳಿದ್ದಾರೆ. (ಸಾಂದರ್ಭಿಕ ಚಿತ್ರ)
3/ 8
ವೈದ್ಯರು ಮಾತು ಪಾಲಿಸದೇ ಮನೆಗೆ ತೆರಳಿದ್ದ ಗಾಯಾಳುವಿಗೆ ಕೆಲ ದಿನಗಳ ಬಳಿಕ ಗಾಯ ಉಲ್ಬಣಗೊಂಡು ನೋವು ಕಾಣಿಸಿಕೊಂಡಿದೆ. (ಸಾಂದರ್ಭಿಕ ಚಿತ್ರ)
4/ 8
ಖಾಸಗಿ ಆಸ್ಪತ್ರೆಗೆ ತೆರಳಿ ವೈದ್ಯರನ್ನು ಸಂಪರ್ಕಿಸಿದ್ದಾನೆ. ಈ ವೇಳೆ ವೈದ್ಯರು ಎಕ್ಸ್ ರೇ ಮಾಡಿದಾಗ ಗಾಯದಲ್ಲಿ ಕಲ್ಲು ಹಾಗೂ ಮಣ್ಣಿನ ಕಣಗಳು ಕಾಣಿಸಿಕೊಂಡಿವೆ. ಇದರಿಂದ ಅಲರ್ಜಿಯಾಗಿ ನೋವು ಕಾಣಿಸಿಕೊಂಡಿದೆ ಎಂದು ವೈದ್ಯರು ಹೇಳಿದ್ದಾರೆ. (ಸಾಂದರ್ಭಿಕ ಚಿತ್ರ)
5/ 8
ಈ ಪ್ರಕರಣದಲ್ಲಿ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ನಿರ್ಲಕ್ಷ್ಯತನ ಕಂಡು ಬಂದಿದೆ. ಈ ಹಿನ್ನೆಲೆ ನೋಟಿಸ್ ನೀಡಲಾಗಿದೆ ಎಂದು ಡಾ. ಕಿಶೋರ್ ಕುಮಾರ್ ತಿಳಿಸಿದ್ದಾರೆ.
6/ 8
ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕೆಂದು ತಿಳಿಸಲಾಗಿದೆ. ಸಿಬ್ಬಂದಿಯ ನಿರ್ಲಕ್ಷ್ಯ ಕಂಡು ಬಂದ್ರೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಕಿಶೋರ್ ಕುಮಾರ್ ಹೇಳಿದ್ದಾರೆ. (ಸಾಂದರ್ಭಿಕ ಚಿತ್ರ)
7/ 8
ನನಗೆ ವೈದ್ಯರು ಖಾಸಗಿ ಆಸ್ಪತ್ರೆಗೆ ತೆರಳುವಂತೆ ಹೇಳಿರಲಿಲ್ಲ. ಎರಡು ದಿನ ಬಳಿಕ ಸರ್ಕಾರಿ ಆಸ್ಪತ್ರೆಗೆ ಹೋದಾದ ಅಂದು ಸಹ ವೈದ್ಯರು ಏನು ಹೇಳಲಿಲ್ಲ ಎಂದು ಗಾಯಾಳು ಪುರುಷೋತ್ತಮ್ ಹೇಳಿದ್ದಾರೆ. (ಸಾಂದರ್ಭಿಕ ಚಿತ್ರ)
8/ 8
ನಾನು ಎಕ್ಸ್ ರೇ ತೆಗೆಸಿ ಖಾಸಗಿ ಆಸ್ಪತ್ರೆಗೆ ತೆರಳಿದಾಗ ಘಟನೆ ತಿಳಿದಿದೆ. ವೈದ್ಯಾಧಿಕಾರಿಗಳು ಮೇಲಾಧಿಕಾರಿಗಳಿಗೆ ತಮ್ಮ ತಪ್ಪು ಮುಚ್ಚಿಕೊಳ್ಳಲು ಸುಳ್ಳು ಹೇಳಿದ್ದಾರೆ. ಈ ಸಂಬಂಧ ದೂರು ನೀಡಲು ನಿರ್ಧರಿಸಿದ್ದೇನೆ ಅಂತ ಹೇಳ್ತಾರೆ ಪುರುಷೋತ್ತಮ್. (ಸಾಂದರ್ಭಿಕ ಚಿತ್ರ)