ಶಿವಸೇನೆ, ಎನ್ಸಿಪಿ ಮತ್ತು ಕಾಂಗ್ರೆಸ್ ಜಂಟಿಯಾಗಿ ಸರ್ಕಾರ ರಚಿಸಲಿದ್ದು, ಮಹಾರಾಷ್ಟ್ರದಲ್ಲಿ ಐದು ವರ್ಷಗಳ ಕಾಲ ಸುಭದ್ರ ಸರ್ಕಾರ ರಚಿಸಲಿದೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಯಾವುದೇ ಪಕ್ಷಗಳು ಸರ್ಕಾರ ರಚಿಸುವಲ್ಲಿ ವಿಫಲವಾದ ಹಿನ್ನೆಲೆ ರಾಷ್ಟ್ರಪತಿ ಆಡಳಿತ ಹೇರಲಾಗಿದ್ದು, ಮಧ್ಯಂತರ ಚುನಾವಣೆ ಎದುರಾಗುವ ಸಾಧ್ಯತೆ ಇದೆ. ಈ ನಡುವೆ ಸರ್ಕಾರ ರಚನೆ ನಡೆಸುವ ಕಸರತ್ತನ್ನು ಶಿವಸೇನೆ, ಎನ್ಸಿಪಿ ಮುಂದುವರೆಸಿದೆ. ಈ ಕುರಿತು ಮತ್ತೊಂದು ಸುತ್ತಿನ ಮಾತುಕತೆ ನಡೆಸಿರುವ ಕಾಂಗ್ರೆಸ್, ಎನ್ಸಿಪಿ, ಶಿವಸೇನೆ ಸರ್ಕಾರ ರಚಿಸುವ ಕುರಿತು ಮತ್ತೊಮ್ಮೆ ಮಾತುಕತೆ ನಡೆಸಿ, ಸರ್ಕಾರ ರಚನೆ ಕುರಿತು ಒಮ್ಮತ ತೀರ್ಮಾನ ನಡೆಸಿವೆ.