Congress Tweet: ಪ್ರೇಮಿಗಳ ದಿನದಂದು ವಿಭಿನ್ನವಾಗಿ ಟ್ವೀಟ್ ಮಾಡಿ ಬಿಜೆಪಿ ಕಾಲೆಳೆದ ಕಾಂಗ್ರೆಸ್

Valentine's Day: ಪ್ರೇಮಿಗಳ ದಿನವಾದ ಇಂದು ಕಾಂಗ್ರೆಸ್ (Congress Tweet) ವಿಭಿನ್ನವಾಗಿ ಟ್ವೀಟ್ ಮಾಡಿ ಬಿಜೆಪಿ ಕಾಲೆಳೆದಿದೆ. ಕಾಂಗ್ರೆಸ್ ಹಂಚಿಕೊಂಡಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ (Social  Media) ವೈರಲ್ ಆಗಿದ್ದು, ಬಿಜೆಪಿ ಆಕ್ರೋಶ ಹೊರ ಹಾಕಿದೆ.

First published:

  • 110

    Congress Tweet: ಪ್ರೇಮಿಗಳ ದಿನದಂದು ವಿಭಿನ್ನವಾಗಿ ಟ್ವೀಟ್ ಮಾಡಿ ಬಿಜೆಪಿ ಕಾಲೆಳೆದ ಕಾಂಗ್ರೆಸ್

    40 ಪರ್ಸೆಂಟ್ ಲವ್ ಹ್ಯಾಷ್ ಟ್ಯಾಗ್ ಮೂಲಕ ಕಾಂಗ್ರೆಸ್ ಸಾಲು ಸಾಲು ಟ್ವೀಟ್ ಮಾಡಿದೆ. ಬಿಜೆಪಿಗರು ಶುದ್ಧ 40% ಪ್ರೇಮಿಗಳು. 40% ಕಮಿಷನ್ ಮೇಲಿನ ಅವರ ಪ್ರೀತಿ ರೋಮಿಯೋ ಜ್ಯುಲಿಯೆಟ್ ಪ್ರೀತಿಗಿಂತಲೂ ಉತ್ಕಟವಾದುದು ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

    MORE
    GALLERIES

  • 210

    Congress Tweet: ಪ್ರೇಮಿಗಳ ದಿನದಂದು ವಿಭಿನ್ನವಾಗಿ ಟ್ವೀಟ್ ಮಾಡಿ ಬಿಜೆಪಿ ಕಾಲೆಳೆದ ಕಾಂಗ್ರೆಸ್

    ಪ್ರಿಯಕರನ ಕನಸು, ಮನಸಲ್ಲೂ ಪ್ರಿಯತಮೆ ಕಾಣುವಂತೆ, ಬಿಜೆಪಿಗರ ಕನಸು ಮನಸ್ಸಿನಲ್ಲೂ 40 ಪರ್ಸೆಂಟಿನದ್ದೇ ಧ್ಯಾನ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರ ವ್ಯಂಗ್ಯ ಫೋಟೋ ಟ್ವೀಟ್ ಮಾಡಿದೆ.

    MORE
    GALLERIES

  • 310

    Congress Tweet: ಪ್ರೇಮಿಗಳ ದಿನದಂದು ವಿಭಿನ್ನವಾಗಿ ಟ್ವೀಟ್ ಮಾಡಿ ಬಿಜೆಪಿ ಕಾಲೆಳೆದ ಕಾಂಗ್ರೆಸ್

    ಬಿಜೆಪಿಗರದ್ದು ಗೋ ಪ್ರೀತಿಯಲ್ಲ, Go ಪ್ರೀತಿ. ಬಿಜೆಪಿಗರು ಗೋವಿನ ಎದುರು ಫ್ಲರ್ಟ್ ಮಾಡುತ್ತಾರೆ ಹೊರತು ಪ್ರೀತಿಯಲ್ಲ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರ ಫೋಟೋ ಟ್ವೀಟ್ ಮಾಡಿದೆ.

    MORE
    GALLERIES

  • 410

    Congress Tweet: ಪ್ರೇಮಿಗಳ ದಿನದಂದು ವಿಭಿನ್ನವಾಗಿ ಟ್ವೀಟ್ ಮಾಡಿ ಬಿಜೆಪಿ ಕಾಲೆಳೆದ ಕಾಂಗ್ರೆಸ್

    ಭಗ್ನ ಪ್ರೇಮಿಯೊಬ್ಬನ ಪ್ರಲಾಪಗಳು, ವಿಮಾನದ ತುರ್ತು ನಿರ್ಗಮನದ ಬಾಗಿಲು ತೆಗೆಯುವುದು, ಸಿಎಂ ಮನೆಗೆ ಕಲ್ಲು ಹೊಡೆಯುವುದು, ರೈತರಿಗೆ ಅವಮಾನಿಸುವುದು. ಪ್ರೀತಿ ಕಳೆದುಕೊಂಡು ವಿಚಿತ್ರವಾಗಿ ವರ್ತಿಸುತ್ತಿರುವ ಈ ಭಗ್ನಪ್ರೇಮಿಗೆ ಕೌನ್ಸ್‌ಲಿಂಗ್ ಅಗತ್ಯವಿದೆ ಎಂದು ಸಂಸದ ತೇಜಸ್ವಿ ಸೂರ್ಯ ವಿರುದ್ಧ ವ್ಯಂಗ್ಯ ಮಾಡಿದೆ.

    MORE
    GALLERIES

  • 510

    Congress Tweet: ಪ್ರೇಮಿಗಳ ದಿನದಂದು ವಿಭಿನ್ನವಾಗಿ ಟ್ವೀಟ್ ಮಾಡಿ ಬಿಜೆಪಿ ಕಾಲೆಳೆದ ಕಾಂಗ್ರೆಸ್

    ಒಮ್ಮೆ ತಿರಸ್ಕಾರ ಭಾವ ಮೂಡಿದರೆ ಮತ್ತೆಂದೂ ಅಲ್ಲಿ ಪ್ರೀತಿಗೆ ಜಾಗವಿಲ್ಲ. ಮಂಡ್ಯದಲ್ಲಿ ತಿರಸ್ಕಾರದ ಪ್ರೇಮವೈಫಲ್ಯ ಅನುಭವಿಸಿ ನೋವಿನಲ್ಲಿರುವ ಭಗ್ನಪ್ರೇಮಿಗೆ ನಮ್ಮ ಸಾಂತ್ವಾನಗಳು ಎಂದು ಮಂಡ್ಯ ಉಸ್ತುವಾರಿಉಯಿಂದ ಹೊರ ಬಂದಿರುವ ಸಚಿವ ಆರ್.ಅಶೋಕ್ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

    MORE
    GALLERIES

  • 610

    Congress Tweet: ಪ್ರೇಮಿಗಳ ದಿನದಂದು ವಿಭಿನ್ನವಾಗಿ ಟ್ವೀಟ್ ಮಾಡಿ ಬಿಜೆಪಿ ಕಾಲೆಳೆದ ಕಾಂಗ್ರೆಸ್

    "ಪ್ರೀತಿ ಮಧುರ, ತ್ಯಾಗ ಅಮರ" ಕುರ್ಚಿಯೊಂದಿಗಿನ ಪ್ರೇಮದ ಸವಿಗಳಿಗೆಯ ನೆನಪು, ವಿರಹದ ನೋವು ಸದಾ ಕಾಡುತ್ತಿರುತ್ತದೆ. ಈಶ್ವರಪ್ಪನವರೇ ತಮಗೆ ವಿರಹದ ನೋವು ಭರಿಸುವ ಶಕ್ತಿ ಸಿಗಲಿ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಗ್ಗೆ ವ್ಯಂಗ್ಯ ಮಾಡಿದೆ.

    MORE
    GALLERIES

  • 710

    Congress Tweet: ಪ್ರೇಮಿಗಳ ದಿನದಂದು ವಿಭಿನ್ನವಾಗಿ ಟ್ವೀಟ್ ಮಾಡಿ ಬಿಜೆಪಿ ಕಾಲೆಳೆದ ಕಾಂಗ್ರೆಸ್

    ಒಂದು ಮುತ್ತಿನ ಕತೆಯಲ್ಲಿ ಪ್ರೇಮಿಗೆ ಜಯ ಸಿಗಲಿಲ್ಲ. "ಸಚಿವ ಹುದ್ದೆ" ಎಂಬ ಪ್ರೇಮ ವೈಫಲ್ಯದಿಂದ ಭಗ್ನಪ್ರೇಮಿಯಾಗಿ ತಿರುಗುತ್ತಿರುವವರ ನೋವು ಜಗತ್ತಿನ ಕಣ್ಣಿಗೆ ಕಾಣುವುದಿಲ್ಲ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಹಳೆಯ ಪ್ರಕರಣವನ್ನು ಕೆದಕಿದೆ.

    MORE
    GALLERIES

  • 810

    Congress Tweet: ಪ್ರೇಮಿಗಳ ದಿನದಂದು ವಿಭಿನ್ನವಾಗಿ ಟ್ವೀಟ್ ಮಾಡಿ ಬಿಜೆಪಿ ಕಾಲೆಳೆದ ಕಾಂಗ್ರೆಸ್

    ಈ ಸ್ಪೆಷಲ್ ಡಾಕ್ಟರ್‌ಗೆ ಹೃದಯ ಬಡಿತವೂ ತಿಳಿಯುತ್ತದೆ. ಲೂಟಿ ಹೊಡೆತವೂ ತಿಳಿದಿದೆ. ಈ ಡಾಕ್ಟರ್‌ಗೂ ಲವ್ವಾಗಿದೆ - PSI ಹುದ್ದೆಗಳ ಮೇಲೆ ಎಂದು ಅಶ್ವಥ್ ನಾರಾಯಣ್ ವಿರುದ್ಧ ಗಂಭೀರ ಆರೋಪ ಮಾಡಿದೆ.

    MORE
    GALLERIES

  • 910

    Congress Tweet: ಪ್ರೇಮಿಗಳ ದಿನದಂದು ವಿಭಿನ್ನವಾಗಿ ಟ್ವೀಟ್ ಮಾಡಿ ಬಿಜೆಪಿ ಕಾಲೆಳೆದ ಕಾಂಗ್ರೆಸ್

    ಪ್ರೇಮದಲ್ಲಿ ಮುಳುಗಿದವರು ಸದಾ ಕಲ್ಪನಾಲೋಕದಲ್ಲಿ ವಿಹರಿಸುತ್ತಿರುತ್ತಾರೆ. ಮತ್ತು ಆ ಭ್ರಮೆಗಳನ್ನೇ ವಾಸ್ತವ ಎಂದು ತಿಳಿದುಕೊಂಡಿರುತ್ತಾರೆ. ಇದು ಪ್ರೇಮದ ಮೊದಲ ಹಂತ ಎಂದು ಸಿ.ಟಿ.ರವಿ ವಿರುದ್ಧ ವಾಗ್ದಾಳಿ ನಡೆಸಿದೆ.

    MORE
    GALLERIES

  • 1010

    Congress Tweet: ಪ್ರೇಮಿಗಳ ದಿನದಂದು ವಿಭಿನ್ನವಾಗಿ ಟ್ವೀಟ್ ಮಾಡಿ ಬಿಜೆಪಿ ಕಾಲೆಳೆದ ಕಾಂಗ್ರೆಸ್

    ಪ್ರೇಮವಿರುವ ಕಡೆ ದ್ವೇಷಕ್ಕೆ ಜಾಗವಿಲ್ಲ. ಆದರೆ ದ್ವೇಷವನ್ನೇ ಪ್ರೇಮಿಸಿದರೆ? ದ್ವೇಷವನ್ನೇ ಪ್ರೀತಿಸಿ, ದ್ವೇಷವನ್ನೇ ಧ್ಯಾನಿಸಿ, ದ್ವೇಷದೊಂದಿಗೆ ರೊಮ್ಯಾನ್ಸ್ ಮಾಡುವ ವಿಶಿಷ್ಠ ಪ್ರೇಮಿ ಇವರು ಎಂದು ಸಂಸದ, ನಳಿನ್ ಕುಮಾರ್ ಕಟೀಲ್ ಫೋಟೋ ಟ್ವೀಟ್ ಮಾಡಿದೆ.

    MORE
    GALLERIES