Karnataka Rains: ಹಾಸನದಲ್ಲಿ ಮುಂದುವರಿದ ಮಳೆ, ಕೊಡಗಿನಲ್ಲಿ ಕೊಂಚ ಬಿಡುವು ನೀಡಿದ ವರುಣ ದೇವ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಭಾರೀ ಮಳೆಯಾಗುವ (Rainfall) ಸಾಧ್ಯತೆ ಹಿನ್ನೆಲೆ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ (Orange Alert) ಘೋಷಣೆ ಮಾಡಲಾಗಿದೆ.
ಸರ್ಕಾರಿ, ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಅಂಗನವಾಡಿಯಿಂದ ಡಿಗ್ರಿ ಕಾಲೇಜ್ ನ ಎಲ್ಲಾ ವಿದ್ಯಾರ್ಥಿಗಳಿಗೆ ರಜೆ ಇರಲಿದೆ.
2/ 7
ಹಾಸನ ಜಿಲ್ಲೆಯಲ್ಲಿ ಸೋಮವಾರದಿಂದ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಹಾಸನ, ಸಕಲೇಶಪುರ, ಆಲೂರು, ಬೇಲೂರಿನಲ್ಲಿ ಭಾರೀ ಮಳೆ ಆಗ್ತಿದೆ.
3/ 7
ಹಾಸನ ಜಿಲ್ಲೆಯ ಮಲೆನಾಡು ಹಾಗೂ ಚಿಕ್ಕಮಗಳೂರಿನಲ್ಲಿ ಮಳೆ ಆಗುತ್ತಿರುವ ಹಿನ್ನೆಲೆ ಹೇಮಾವತಿ ನದಿಗೆ ಒಳಹರಿವಿನಲ್ಲಿ ಹೆಚ್ಚಳವಾಗಿದೆ. ಹೇಮಾವತಿ ನದಿಗೆ 9464 ಕ್ಯೂಸೆಕ್ ಒಳಹರಿವು ಇದ್ದು, ಹೇಮಾವತಿ ಜಲಾಶಯದ ಗರಿಷ್ಠ ನೀರಿನ ಮಟ್ಟ 2922 ಅಡಿ ಇದೆ.
4/ 7
ಇಂದು ಜಲಾಶಯದಲ್ಲಿನ ನೀರಿನ ಮಟ್ಟ 2910.54 ಅಡಿ ಇದೆ. ಜಲಾಶಯದ ನೀರಿನ ಸಂಗ್ರಹ ಪ್ರಮಾಣ 37.103 ಟಿಎಂಸಿಗಳಾಗಿದ್ದು, ಇಂದು ಜಲಾಶಯದಲ್ಲಿರುವ ನೀರಿನ ಪ್ರಮಾಣ 27.090 ಟಿಎಂಸಿ ಇದೆ.
5/ 7
ಕಳೆದ ಮೂರು ದಿನಗಳಿಂದ ಸುರಿಯುತ್ತಿದ್ದ ವರುಣರಾಯ ಕೊಡಗಿನಲ್ಲಿ ಕೊಂಚ ವಿರಾಮ ನೀಡಿದ್ದಾನೆ. ಮಳೆ ಕಡಿಮೆಯಾದ ಹಿನ್ನೆಲೆ ತ್ರಿವೇಣಿ ಸಂಗಮದಲ್ಲಿ ನೀರು ಇಳಿಕೆಯಾಗಿದೆ.
6/ 7
ಭಾಗಮಂಡಲ ನಾಪೋಕ್ಲು ರಸ್ತೆ ಮೇಲೆ ಅರ್ಧ ಅಡಿ ನೀರು ನಿಂತಿದೆ. ಮಡಿಕೇರಿ ಭಾಗಮಂಡಲ ರಸ್ತೆ ಸಹಜ ಸ್ಥಿತಿಗೆ ಮರಳಿದೆ. ನಿನ್ನೆ ರಾತ್ರಿಯಿಂದ ಬ್ರಹ್ಮಗಿರಿ ತಪ್ಪಲಲ್ಲಿ ಮಳೆ ಕಡಿಮೆ ಆಗಿದೆ.
7/ 7
ಕೊಡಗಿನಲ್ಲಿ ಕಳೆದ ಎರಡು ದಿನಗಳು ಭಾರಿ ಮಳೆ ಸುರಿದಿದ್ದ ಹಿನ್ನೆಲೆ ತಲಕಾವೇರಿ ರಸ್ತೆಯಲ್ಲಿ ಬಂಡೆಗಳು ಉರುಳಿವೆ. ಭಾಗಮಂಡಲದಿಂದ ನಾಲ್ಕು ಕಿಲೋ ಮೀಟರ್ ದೂರದಲ್ಲಿ ಬೆಟ್ಟದಿಂದ ಬಂಡೆ ಉರುಳಿದ್ದು, ವಾಹನ ಸಂಚಾರಕ್ಕೆ ತೊಂದರೆಯುಂಟಾಗಿದೆ.