Ibrahim Sutar: ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ನಿಧನ
ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಕೊನೆಯುಸಿರೆಳದಿದ್ದಾರೆ. ಇಂದು ಬೆಳಗ್ಗೆ 6.30ಕ್ಕೆ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದ ಹೃದಯ ಬೇನೆಯಿಂದ ಬಳಲುತ್ತಿದ್ದ ಸುತಾರ್ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇಂದು ಬೆಳಗ್ಗೆ ಮತ್ತೇ ಲಘು ಹೃದಯಾಘಾತವಾಗುತ್ತಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು.
2/ 7
ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇಬ್ರಾಹಿಂ ಸುತಾರ್ ಅವರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇಬ್ರಾಹಿಂ ಸುತಾರ್ ಅವರಿಗೆ 76 ವರ್ಷ ವಯಸ್ಸಾಗಿತ್ತು.
3/ 7
ಇಬ್ರಾಹಿಂ ಸುತಾರ್ ಅವರು ನಾಡಿನೆಲ್ಲೆಡೆ ಪ್ರವಚನ ನೀಡಿ ಭಾವೈಕ್ಯತೆ ಸಂದೇಶ ಸಾರಿ ಹೆಸರು ವಾಸಿಯಾಗಿದ್ದರು.
4/ 7
ಹಿಂದೂ ಮುಸ್ಲಿಂ ಭಾವೈಕ್ಯತೆ ಶ್ರೇಷ್ಠ ಪ್ರವಚಕ, ಸೂಫಿ ಸಂತರಾಗಿದ್ದ ಸುತಾರ್ ಗೆ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗೆ ಭಾಜನರಾಗಿದ್ದರು.
5/ 7
ಇಬ್ರಾಹಿಂ ಸುತಾರ ಅವರ ಅಂತ್ಯಕ್ರಿಯೆ ಮಧ್ಯಾಹ್ನ 2 ಗಂಟೆಯ ನಂತರ ಮಹಾಲಿಂಗಪುರದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
6/ 7
ಇಬ್ರಾಹಿಂ ಸುತಾರ ಅವರ ಮಾತುಗಳು ಮತ್ತು ಹಾಡುಗಳು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಹೆಚ್ಚು ವೈರಲ್ ಆಗಿವೆ. ನಿಧನದ ಸುದ್ದಿ ಬಳಿಕ ಮಹಾಲಿಂಗಪುರದ ಜನತೆ ಇಬ್ರಾಹಿಂ ಸುತಾರ ಅವರ ನಿವಾಸದತ್ತ ದೌಡಾಯಿಸುತ್ತಿದ್ದಾರೆ.
7/ 7
ಸುತಾರ್ ಅವರಿಗೆ ನಾಲ್ಕು ವರ್ಷಗಳ ಹಿಂದೆ ಕೇಂದ್ರ ಸರ್ಕಾರ (ಏಪ್ರಿಲ್ 2, 2018) ಪದ್ಮಶ್ರೀ ನೀಡಿ ಗೌರವಿಸಿತ್ತು. ಇಂದಿಗೂ ಸುತಾರ ಅವರು ಪ್ರವಚನ ಕಾರ್ಯಕ್ರಮಗಳನ್ನು ನೀಡುತ್ತಿದ್ದರು.