Pejawar Shree Passes Away: ರಾಜಕೀಯ ನಾಯಕರ ಜೊತೆಗಿನ ನಂಟು ಬಿಚ್ಚಿಡುವ ಪೇಜಾವರ ಶ್ರೀಗಳ ಅಪರೂಪದ ಫೋಟೋಗಳು
Pejawar Shree Passes Away: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪೇಜಾವರ ಮಠದ ವಿದ್ಯೇಶ ತೀರ್ಥ ಸ್ವಾಮೀಜಿ ಇಂದು ಬೆಳಗ್ಗೆ 9.20ಕ್ಕೆ ಕೊನೆಯುಸಿರೆಳೆದಿದ್ದಾರೆ. ಧಾರ್ಮಿಕ ಕ್ಷೇತ್ರದಲ್ಲಿ ಮಾತ್ರವಲ್ಲದೆ ಸಾಮಾಜಿಕ, ರಾಜಕೀಯ ಚಟುವಟಿಕೆಗಳಿಗೂ ಪ್ರತಿಕ್ರಿಯಿಸುತ್ತ, ಎಲ್ಲ ರಂಗದಲ್ಲೂ ಸಕ್ರಿಯರಾಗಿದ್ದ ಪೇಜಾವರ ಶ್ರೀಗಳು ದೇಶಾದ್ಯಂತ ಪರಿಚಿತರಾಗಿದ್ದವರು. ಹಾಲಿ ರಾಜಕೀಯ ನಾಯಕರಷ್ಟೇ ಅಲ್ಲದೆ, ಮಾಜಿ ಪ್ರಧಾನಿಗಳಾದ ವಾಜಪೇಯಿ, ಇಂದಿರಾ ಗಾಂಧಿ ಸೇರಿದಂತೆ ರಾಜ್ಯದ ಇದುವರೆಗಿನ ಬಹುತೇಕ ಎಲ್ಲ ಮುಖ್ಯಮಂತ್ರಿಗಳ ಜೊತೆಗಿನ ಶ್ರೀಗಳ ಒಡನಾಟವನ್ನು ಬಿಂಬಿಸುವ ಫೋಟೋಗಳು ಇಲ್ಲಿವೆ.
ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಜೊತೆ ಪೇಜಾವರ ಮಠದ ವಿದ್ಯೇಶ ತೀರ್ಥ ಸ್ವಾಮೀಜಿ
3/ 24
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಸಂದರ್ಭ
4/ 24
ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಪೇಜಾವರ ಶ್ರೀಗಳು
5/ 24
ಧರ್ಮಸ್ಥಳದಲ್ಲಿ ನಡೆದ ಬಾಹುಬಲಿ ಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜೊತೆ ಉಭಯ ಕುಶಲೋಪರಿ ವಿಚಾರಿಸುತ್ತಿರುವ ಪೇಜಾವರದ ವಿದ್ಯೇಶ ತೀರ್ಥ ಸ್ವಾಮೀಜಿ
6/ 24
ಸಮಾರಂಭವೊಂದರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರೊಂದಿಗೆ ಪೇಜಾವರ ಶ್ರೀಗಳು
7/ 24
ಉಡುಪಿ ಮಠಕ್ಕೆ ಮೈಸೂರು ಒಡೆಯರಾದ ಚಾಮರಾಜ ಒಡೆಯರ್ ಭೇಟಿ ನೀಡಿದ ಸಂದರ್ಭ
8/ 24
ಮಾಜಿ ಮುಖ್ಯಮಂತ್ರಿ ದಿ. ಜೆ.ಎಚ್. ಪಟೇಲ್ ಅವರೊಂದಿಗೆ ಪೇಜಾವರ ಶ್ರೀಗಳು
9/ 24
ಮಾಜಿ ಮುಖ್ಯಮಂತ್ರಿ ದಿ. ರಾಮಕೃಷ್ಣ ಹೆಗಡೆ ಅವರೊಂದಿಗೆ ಪೇಜಾವರ ಶ್ರೀಗಳು