ಬಸವಸಾಗರ ಜಲಾಶಯದಿಂದ 1.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ; ಜಲ ರೌದ್ರ ನರ್ತನದ ಚಿತ್ರಗಳು

ಮಹಾರಾಷ್ಟ್ರದ ಮಹಾಮಳೆಗೆ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಸಮೀಪದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1 ಲಕ್ಷ 82 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ಜಲಾಶಯಕ್ಕೆ 1 ಲಕ್ಷ 80 ಸಾವಿರ ಕ್ಯೂಸೆಕ್ ನೀರು ಒಳಹರಿವಿದೆ. 33 ಟಿಎಂಸಿ ಸಾಮರ್ಥ್ಯ ದ ಜಲಾಶಯದಲ್ಲಿ ಈಗ 28 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಎಲ್ಲ ಗೇಟ್ ಗಳ ಮೂಲಕ ಕೃಷ್ಣಾ ನದಿಗೆ ನೀರು ಬಿಡಲಾಗುತ್ತಿದ್ದು, ಕೃಷ್ಣಾ ನದಿ ಅಪಾಯ ಮಟ್ಟ ಮೀರಿ ಉಕ್ಕಿ ಹರಿಯುತ್ತಿದೆ.

First published: