ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಂದು ಸಾವಿರಾರು ರೈತರು ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಮಜೆಸ್ಟಿಕ್ನಿಂದ ಫ್ರೀಡಂ ಪಾರ್ಕ್ವರೆಗೆ ರ್ಯಾಲಿ ಹೊರಟು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸಿಎಂ ಹಾಗೂ ಡಿಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸ್ಥಳಕ್ಕೆ ಆಗಮಿಸುವಂತೆ ಆಗ್ರಹಿಸಿದರು. ಇಲ್ಲವಾದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು. ರೈತ ಮಹಿಳೆ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಸಿಎಂ ಕುಮಾರಸ್ವಾಮಿ ಕ್ಷಮೆ ಯಾಚಿಸಬೇಕು ಎಂದು ಪಟ್ಟು ಹಿಡಿದರು. ಅನ್ನದಾತರು ಉರಿಬಿಸಿಲಿನಲ್ಲೇ ರಸ್ತೆಯಲ್ಲೇ ಮಲಗಿ ಹೋರಾಟ ನಡೆಸಿದರು, ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ, ಬೇಡಿಕೆ ಈಡೇರಿಸಲು 15 ದಿನಗಳ ಗಡುವು ನೀಡಿ ತಮ್ಮ ಊರುಗಳ ಕಡೆ ನಡೆದರು.