PM Modi: ಜನವರಿ 12ರಂದು ರಾಜ್ಯದ ಈ ನಗರಕ್ಕೆ ಪ್ರಧಾನಿ ಮೋದಿ ಆಗಮನ
Karnataka Election 2023: ವಿಧಾನಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ಬಿಜೆಪಿ ಹೈಕಮಾಂಡ್ ನಾಯಕರು ಅಲರ್ಟ್ ಆಗಿದ್ದಾರೆ. ರಾಜ್ಯದಲ್ಲಿ ಈ ಬಾರಿಯೂ ಕಮಲ ಅರಳಿಸಲು ರೆಡಿಯಾಗಿದ್ದಾರೆ.
ಗುಜರಾತ್ ಗೆಲುವಿನ ಖುಷಿಯಲ್ಲಿರೋ ಬಿಜೆಪಿ ಕರ್ನಾಟಕವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ.
2/ 7
ಈಗಾಗಲೇ ಜನಸಂಕಲ್ಪ ಯಾತ್ರೆ, ಎಸ್ ಟಿ ಸಮಾವೇಶಗಳ ಮೂಲಕ ಚುನಾಣಾ ಪ್ರಚಾರ ಕಾರ್ಯವನ್ನು ಬಿಜೆಪಿ ಆರಂಭಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷಮ ಜೆ.ಪಿ.ನಡ್ಡಾ ಸೇರಿದಂತೆ ಹಲವು ಹೈಕಮಾಂಡ್ ನಾಯಕರು ರಾಜ್ಯದತ್ತ ಮುಖ ಮಾಡಿದ್ದಾರೆ.
3/ 7
ಮತ್ತೊಂದು ಕಡೆ ಆರ್ಎಸ್ಎಸ್ ನಾಯಕರು ಸಹ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಜೊತೆಯಲ್ಲಿ ಚುನಾವಣೆ ಕುರಿತು ಚರ್ಚೆ ನಡೆಸುತ್ತಿದ್ದಾರೆ.
4/ 7
ಜನವರಿ 12ಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ
ಜನವರಿ 12ಕ್ಕೆ ಖದ್ದು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವದ ಆಯೋಜನೆ ಕುರಿತು ಪೂರ್ವಭಾವಿ ಸಭೆ ನಡೆಯಲಿದೆ.
5/ 7
ಹುಬ್ಬಳ್ಳಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವದ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಈ ಮೊದಲು ಬೆಳಗಾವಿಯಲ್ಲಿ ರಾಷ್ಟ್ರೀಯ ಯುವಜನೋತ್ಸವದ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚೆಯಾಗಿತ್ತು.
6/ 7
ಆದ್ರೆ ಇದೀಗ ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವಜನೋತ್ಸವದ ಕಾರ್ಯಕ್ರಮ ನಡೆಸಲು ಸರ್ಕಾರ ಮುಂದಾಗಿದೆ.
7/ 7
ಇಂದು ಸಂಜೆ 6 ಗಂಟೆಗೆ ಸಿಎಂ ಬೊಮ್ಮಾಯಿ ಹಾಗೂ ಕ್ರೀಡಾ ಸಚಿವ ನಾರಾಯಣ ಗೌಡ ನೇತೃತ್ವದಲ್ಲಿ ಸುವರ್ಣ ಸೌಧದಲ್ಲಿ ಮಹತ್ವದ ಸಭೆ ನಡೆಯಲಿದೆ.