Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು ಅಂತಿಮ
Kuvempu Airport: ಇಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನಿರಿಸಲಾಗುವುದು ಎಂದು ಘೋಷಿಸಿದರು.
ಕಳೆದ ಹಲವು ದಿನಗಳಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಾರ ಹೆಸರಿಡಬೇಕು ಎಂಬುದರ ಬಗ್ಗೆ ಸುದೀರ್ಘ ಚರ್ಚೆಗಳು ನಡೆದಿದ್ದವು.
2/ 7
ಆರಂಭದಲ್ಲಿ ಆಡಳಿತರೂಢ ಬಿಜೆಪಿ ಸರ್ಕಾರ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಹೆಸರಿಡಲು ಮುಂದಾಗಿತ್ತು.
3/ 7
ಈ ವಿಷಯ ತಿಳಿದ ಕೂಡಲೇ ಯಡಿಯೂರಪ್ಪನವರು ತಮ್ಮ ಹೆಸರು ಬೇಡ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು.
4/ 7
ಪತ್ರದಲ್ಲಿ ತಮ್ಮ ಹೆಸರಿನ ಬದಲಾಗಿ ರಾಷ್ಟ್ರಕವಿ ಕುವೆಂಪು ಹೆಸರಿಡಲು ಸರ್ಕಾರಕ್ಕೆ ಸಲಹೆಯನ್ನು ನೀಡಿದ್ದರು. ಬಿಎಸ್ವೈ ಸಲಹೆಯಂತೆ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರಿಡಲು ನಿರ್ಧರಿಸಲಾಗಿದೆ.
5/ 7
ಇದೇ ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ ಕುವೆಂಪು ವಿಮಾನ ನಿಲ್ದಾಣದ ಉದ್ಘಾಟನೆ ಮಾಡಲಿದ್ದಾರೆ.
6/ 7
3,200 ಮೀಟರ್ ಉದ್ದದ ರನ್ ವೇ
ಶಿವಮೊಗ್ಗ ವಿಮಾನ ನಿಲ್ದಾಣ ಕರ್ನಾಟಕದ ಅತಿ ದೊಡ್ಡ ರನ್ ವೇ ಹೊಂದಿರುವ ಎರಡನೇ ವಿಮಾನ ನಿಲ್ದಾಣ ಆಗಲಿದೆ. 3,200 ಮೀಟರ್ ಉದ್ದದ ರನ್ ವೇ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ.
7/ 7
660 ಎಕರೆ ಪ್ರದೇಶದಲ್ಲಿದೆ ಈ ವಿಮಾನ ನಿಲ್ದಾಣ
ಸುಮಾರು 660 ಎಕರೆ ಪ್ರದೇಶದಲ್ಲಿ 220 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರೋ ಶಿವಮೊಗ್ಗ ವಿಮಾನ ನಿಲ್ದಾಣ 45 ಮೀಟರ್ ಅಗಲದ 3,200 ಮೀಟರ್ ಉದ್ದದ ರನ್ ವೇ ಹೊಂದಿದೆ.
First published:
17