ಸಾಲು ಸಾಲು ಹತ್ಯೆಗಳ ಬಳಿಕ ಮಂಗಳೂರು ಪ್ರವೇಶಕ್ಕೆ ಪ್ರಮೋದ್ ಮುತಾಲಿಕ್ ಅವರಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಇಂದು ಮಂಗಳೂರು ಪ್ರವೇಶಕ್ಕೆ ಯತ್ನಿಸಿದಾಗ ಮುತಾಲಿಕ್ ಅವರನ್ನ ಟೋಲ್ ಗೇಟ್ ಬಳಿಯೇ ತಡೆಯಲಾಯ್ತು.
2/ 7
ಸರ್ಕಾರ ಹಿಂದೂಗಳಿಗೆ ರಕ್ಷಣೆ ನೀಡುತ್ತಿಲ್ಲ. ಆದ್ದರಿಂದ ಎಲ್ಲರೂ ತಮ್ಮ ತಮ್ಮ ರಕ್ಷಣೆಗೆ ಆಯುಧಗಳನ್ನು ಹಿಡಿದುಕೊಳ್ಳಬೇಕೆಂದು ಎಂದು ಪ್ರಚೋದನಾತ್ಮಕ ಹೇಳಿಕೆ ನೀಡಿದರು.
3/ 7
ಈ ವೇಳೆ ಜಿಲ್ಲಾಡಳಿತ ಮತ್ತು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ ಪ್ರಮೋದ್ ಮುತಾಲಿಕ್, ಹೊಸ ಪಕ್ಷ ಕಟ್ಟುವ ಬಗ್ಗೆ ಘೋಷಣೆ ಮಾಡಿದರು.
4/ 7
ಕೊಲೆ, ಹಲ್ಲೆ, ಗಲಾಟೆಯಾದಾಗ ಉಗ್ರವಾದ ಹೇಳಿಕೆಗಳು ಬರುತ್ತವೆ. ಇದುವರೆಗೆ ಯಾವುದೇ ರೀತಿಯ ಕಠಿಣ ಪ್ರಕ್ರಿಯೆ ನಡೆದಿಲ್ಲ. ಇದೇ ಕಾರಣಕ್ಕೆ ಪ್ರವೀಣ್ ಹತ್ಯೆ ಆಗಿದೆ. ಇದು ಕಾನೂನು, ಸರ್ಕಾರದ ವೈಫಲ್ಯ ಎಂದು ಕಿಡಿಕಾರಿದರು.
5/ 7
ಬಿಜೆಪಿಗೆ ಹಿಂದೂಗಳ ಸುರಕ್ಷತೆ ಕಾಳಜಿಯಿದ್ದಲ್ಲಿ ಎಸ್ಡಿಪಿಐ, ಪಿಎಫ್ಐ ಬ್ಯಾನ್ ಮಾಡಬೇಕು ಎಂದು ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.
6/ 7
ರಾಜ್ಯದಲ್ಲಿ ನಡೆಯುತ್ತಿರುವ ಸಾಲು ಸಾಲು ಹಿಂದೂಗಳ ಹತ್ಯೆ ನಡೆಯುತ್ತಿದೆ. ಇದರಿಂದ ಧಾರ್ಮಿಕ ಹೋರಾಟಗಾರರು ಮತ್ತು ಸ್ವಾಮೀಜಿಗಳು ಅಸಮಾಧಾನಗೊಂಡಿದ್ದಾರೆ.
7/ 7
ಪ್ರವೀಣ್ ನೆಟ್ಟಾರು ಕೊಲೆ ಬಳಿಕ ಪಕ್ಷದ ಕಾರ್ಯಕರ್ತರು ಬಿಜೆಪಿ ವಿರುದ್ಧವೇ ತಮ್ಮ ಅಸಾಮಾಧಾನ ಹೊರ ಹಾಕ್ತಿದ್ದಾರೆ. ಇದರ ಭಾಗವಾಗಿಯೇ ಕಮಲ ಮನೆಯಲ್ಲಿ ರಾಜೀನಾಮೆ ಪರ್ವ ಆರಂಭಗೊಂಡಿದೆ.