DK Shivakumar: ತಾರಕಕ್ಕೇರಿದ ಪ್ರತಿಭಟನೆ; ಡಿಕೆ ಶಿವಕುಮಾರ್ ಮನೆ ಮುಂದೆ ನೂಕುನುಗ್ಗಲು
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆ ಮೇಲೆ ಇಂದು ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉಪಚುನಾವಣೆ ಸಂದರ್ಭದಲ್ಲಿ ನಡೆಸಿದ ಈ ದಾಳಿ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ದಾಳಿ ಖಂಡಿಸಿ ಡಿಕೆ ಶಿವಕುಮಾರ್ ಮನೆ ಎದುರು ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ನೂಕು ನುಗ್ಗಲು ಉಂಟಾಗಿದೆ.