ಸದ್ಯ ರಾಜೇಶ್ ಅವರನ್ನ ಬಂಧಿಸಿ, ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಬಿಜೆಪಿ ನಾಯಕಿ ದಿವ್ಯಾ ಹಾಗರಗಿ PSI ನೇಮಕಾತಿ ಅಕ್ರಮಕ್ಕೆ ಕಾರಣವಾದ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರಾಗಿದ್ದಾರೆ.
2/ 8
ಪ್ರಕರಣ ಸಂಬಂಧ ಸಿಐಡಿ ದಿವ್ಯಾ ಹಾಗರಗಿ ಮನೆ ಮೇಲೆ ಭಾನುವಾರ ದಾಳಿ ನಡೆಸಿ ಶೋಧ ನಡೆಸಿದ್ದರು. ಆ ವೇಳೆ ದಿವ್ಯಾ ಹಾಗರಗಿ ಮನೆಯಲ್ಲಿ ಇರಲಿಲ್ಲ.
3/ 8
ಕಳೆದ ನಾಲ್ಕು ದಿನಗಳಿಂದ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ದಿವ್ಯಾ ಹಾಗರಗಿ ನಾಪತ್ತೆಯಾಗಿದ್ದಾರೆ. ಇನ್ನು ಮನೆಯಲ್ಲಿ ಸಿಐಡಿ ಪೊಲೀಸರು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿರುವ ಮಾಹಿತಿ ಲಭ್ಯವಾಗಿದೆ.
4/ 8
ಸದ್ಯ ರಾಜೇಶ್ ನ್ಯಾಯಾಂಗ ಬಂಧನದಲ್ಲಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. PSI ನೇಮಕಾತಿ ಪ್ರಕರಣ ಬಗೆದಷ್ಟು ಆಳಕ್ಕೆ ಹೋಗುತ್ತಿದ್ದು, ಇನ್ನು ಯಾರ್ ಯಾರ ಹೆಸರುಗಳು ಹೊರ ಬರುತ್ತವೆ ಎಂದು ಕಾದು ನೋಡಬೇಕಿದೆ. ಇದುವರೆಗೂ ಎಂಟು ಜನರ ಬಂಧನವಾಗಿದೆ.
5/ 8
ಗೃಹ ಸಚಿವರು ಇದರ ಹಿಂದೆ ಇದ್ದಾರೆ. ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಬಳಿಗೆ ಹೋಗಲು ಯಾವುದೇ ಸಚಿವರಿಗೂ ತಾಕತ್ತಿಲ್ಲ. ಇವರ 40 ಪರ್ಸಂಟೇಜ್ ವಿಚಾರದಲ್ಲಿ ಅಭ್ಯರ್ಥಿಗಳ ಭವಿಷ್ಯ ಹಾಳಾಗಿದೆ ಎಂದು ಮಾಹಿ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.
6/ 8
ಬಿಜೆಪಿಯ ಪದಾಧಿಕಾರಿಗಳೇ ಈ ಭ್ರಷ್ಟಾಚಾರ ದಲ್ಲಿ ಪಾಲ್ಗೊಂಡಿದಾರೆ. ಅವರನ್ನು ಈ 40% ಸರ್ಕಾರ ಕಾಪಾಡುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
7/ 8
ಸರಿಯಾಗಿ ತನಿಖೆ ನಡೆದರೆ ಎರಡು ವಿಕೆಟ್ ಬೀಳುತ್ತವೆ ನಿಷ್ಪಕ್ಷಪಾತವಾಗಿ ತನಿಖೆ ಮಾಡಿದರೆ ಅರ್ಧ ಕ್ಯಾಬಿನೆಟ್ ಖಾಲಿಯಾಗುತ್ತದೆ. ಆಗ ಅನಿವಾರ್ಯವಾಗಿ ವಿಧಾನಸಭೆ ವಿಸರ್ಜನೆ ಮಾಡಬೇಕಾಗುತ್ತದೆ ಎಂದರು.
8/ 8
ಬಿಜೆಪಿ ಪದಾಧಿಕಾರಿಯ ಶಾಲೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ. ಅದರ ಬಗ್ಗೆ ನಮ್ಮ ಬಳಿ ಸಂಪೂರ್ಣ ಮಾಹಿತಿ ಇದೆ. ಬಿಜೆಪಿ ಪದಾಧಿಕಾರಿ ಮನೆಗೆ ಹೊಗಿಲ್ಲ ಎಂದು ಗೃಹ ಸಚಿವರು ಹೇಳಲಿ. ನಮ್ಮ ಬಳಿ ಪೋಟೋ ಎಲ್ಲ ಇದೆ. ಈಶ್ವರಪ್ಪ ಬಂಧನ ಆಗಲಿಆ ಮೇಲೆ ಎಲ್ಲ ದಾಖಲೆ ಬಿಚ್ಚುತ್ತೇವೆ. ಸರ್ಕಾರದ ಸಚಿವರು ಆಲ್ ಔಟ್ ಆಗ್ತಾರೆ ಎಂದು ಟೀಕಿಸಿದರು.