PU Midterm ಪರೀಕ್ಷೆಗೆ ದಿನಾಂಕ ಫಿಕ್ಸ್; ಬೆಂಗಳೂರಲ್ಲಿ ಮಳೆಯಿಂದ ನಾಳೆ ಶಾಲಾ-ಕಾಲೇಜುಗಳಿಗೆ ರಜೆ
PU Midterm Exam date: 2021-22 ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆ ಸಂಬಂಧ ಸೃಷ್ಟಿಯಾಗಿದ್ದ ಗೊಂದಲಕ್ಕೆ ತೆರೆ ಬಿದ್ದಿದೆ. ಪರೀಕ್ಷೆಗಳನ್ನು ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ದಿನಾಂಕವನ್ನು ಘೋಷಿಸಿದೆ.
ಡಿಸೆಂಬರ್ 9ರಿಂದ 23 ರವರೆಗೆ ಪರೀಕ್ಷೆ ನಿಗದಿ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಪ್ರಶ್ನೆ ಪತ್ರಿಕೆಗಳನ್ನ ಎಲ್ಲ ಜಿಲ್ಲಾ ಉಪನಿರ್ದೇಶಕರಿಗೆ ಒದಗಿಸಲಾಗುವುದು ಎಂದು ತಿಳಿಸಿದೆ.
2/ 5
ಪ್ರಶ್ನೆ ಪತ್ರಿಕೆಗಳನ್ನು ಅಗತ್ಯಕ್ಕೆ ಅನುಗುಣವಾಗಿ ಮುದ್ರಿಸಿ, ನೋಡಲ್ ಕೇಂದ್ರಗಳ ಮೂಲಕ ಆಯಾ ವಿಷಯದ ಪರೀಕ್ಷಾ ಕೇಂದ್ರಗಳಿಗೆ ರವಾನೆ ಮಾಡಲಾಗುವುದು. (ಸಾಂದರ್ಭಿಕ ಚಿತ್ರ)
3/ 5
ಪ್ರಶ್ನೆ ಪತ್ರಿಕೆ ವಿತರಣೆ ಮಾಡುವುದು ಆಯಾ ಕಾಲೇಜುಗಳ ಪ್ರಾಂಶುಪಾಲರದ್ದೇ ಆಗಿರತ್ತೆ. ಪ್ರಥಮ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆ ಆಯಾ ಕಾಲೇಜು ಹಂತದಲ್ಲಿಯೇ ನಡೆಯಲಿದೆ. ಪ್ರಾಂಶುಪಾಲರು ತಮ್ಮ ಉಸ್ತುವಾರಿಯಲ್ಲಿ ಸಂಬಂಧಪಟ್ಟ ವಿಷಯಗಳ ಉಪನ್ಯಾಸಕರಿಂದ ಪ್ರಶ್ನೆ ಪತ್ರಿಕೆಗಳನ್ನ ಸಿದ್ಧಪಡಿಸಬೇಕು. (ಪ್ರಾತಿನಿಧಿಕ ಚಿತ್ರ)
4/ 5
ಪರೀಕ್ಷೆ ನಡೆಸಿ, ಮೌಲ್ಯಮಾಪನ ಮಾಡಿಸುವುದು, ಅಂಕಗಳನ್ನ ತಿಳಿಸಿ, ಪರೀಕ್ಷೆ ಮುಗಿದ ಮೇಲೆ ಕಾರ್ಯನಿರತ 15 ದಿನಗಳೊಳಗೆ SATS portal ನಲ್ಲಿ ರಿಜಿಸ್ಟರ್ ಮಾಡಬೇಕು ಎಂದು ಸುತ್ತೋಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)
5/ 5
ಇನ್ನು ಬೆಂಗಳೂರಿನಲ್ಲಿ ಎಡಬಿಡದೆ ಮಳೆ ಸುರಿಯುತ್ತಿರುವುದರಿಂದ ನಾಳೆ (ನ.19) ಒಂದು ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಬೆಂಗಳೂರು ಜಿಲ್ಲಾಧಿಕಾರಿ ಆದೇಶ ಹೊರಡಿದ್ದಾರೆ. (ಸಾಂದರ್ಭಿಕ ಚಿತ್ರ)