ಬಸ್ ಪ್ರಯಾಣ ವೇಳೆ ಪ್ರಯಾಣಿಕರ ಜೊತೆ ಮಾತುಕತೆ ನಡೆಸಿದ ರಾಹುಲ್ ಗಾಂಧಿ, ಜನರ ಸಮಸ್ಯೆಗಳನ್ನು ಆಲಿಸಿದರು. ಇದೇ ವೇಳೆ ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ವಿವರಿಸಿ ಮತಯಾಚನೆ ಮಾಡಿದರು .
2/ 8
ಮಹಿಳಾ ಪ್ರಯಾಣಿಕರ ಜೊತೆ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತದೆ ಎಂದು ಹೇಳಿ ಮತ ಕೇಳಿದರು.
3/ 8
ಕನ್ನಿಂಗ್ ಹ್ಯಾಮ್ ರಸ್ತೆ ಯಿಂದ ಲಿಂಗರಾಜಪುರಂವರೆಗೆ 5 ಕಿಲೋ ಮೀಟರ್ ದೂರ ಬಿಎಂಟಿಸಿ ಬಸ್ನಲ್ಲಿಯೇ ರಾಹುಲ್ ಗಾಂಧಿ ಪ್ರಯಾಣಿಸಿದರು.
4/ 8
ಇನ್ನು ತಮ್ಮ ಬಸ್ನಲ್ಲಿ ರಾಹುಲ್ ಗಾಂಧಿ ಅವರು ಬರುತ್ತಿದ್ದಂತೆ ಪ್ರಯಾಣಿಕರು ಒಂದು ಕ್ಷಣ ಆಶ್ಚರ್ಯಗೊಂಡರು. ನಂತರ ರಾಹುಲ್ ಗಾಂಧಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂತಸಪಟ್ಟರು.
5/ 8
ಇಂದು ಬಹಿರಂಗ ಚುನಾವಣೆಗೆ ಅಂತಿಮ ದಿನವಾಗಿದ್ದು, ಬೆಂಗಳೂರು ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು 500 ಕಡೆ ಪ್ರಚಾರ ನಡೆಸುತ್ತಿದ್ದಾರೆ.
6/ 8
ಕಾಂಗ್ರೆಸ್ 5 ಗ್ಯಾರಂಟಿಗಳನ್ನು ತಿಳಿಸುವ ಬ್ಯಾನರ್ಗಳನ್ನ ಹಿಡಿದು ಪ್ರಚಾರ ಮಾಡಲಾಗುತ್ತಿದೆ. ಬೆಂಗಳೂರಿನ ಪ್ರಮುಖ ಸಿಗ್ನಲ್ನ್ಲಿ ಬ್ಯಾನರ್ ಹಿಡಿದು ಅಂತಿಮ ಹಂತದ ಕಸರತ್ತು ಮಾಡಲಾಗುತ್ತಿದೆ.
7/ 8
ಇಂದು ಮಧ್ಯಾಹ್ನದ ನಂತರ ರಾಹುಲ್ ಗಾಂಧಿ ದೆಹಲಿಗೆ ಹಿಂದಿರುಗಲಿದ್ದಾರೆ. ಇತ್ತ ಪ್ರಿಯಾಂಕಾ ಗಾಂಧಿ ಇಂದು ಚಿಕ್ಕಪೇಟೆಯಲ್ಲಿ ರೋಡ್ಶೋ ನಡೆಸುತ್ತಿದ್ದಾರೆ.
8/ 8
ಇಂದು ಬೆಳಗ್ಗೆ ರಾಹುಲ್ ಗಾಂಧಿ ಸುದ್ದಿಗೋಷ್ಠಿ ಕರೆದಿದ್ದರು. ಆದ್ರೆ ಕೊನೆಯ ಕ್ಷಣದಲ್ಲಿ ಸುದ್ದಿಗೋಷ್ಠಿ ರದ್ದುಗೊಳಿಸಲಾಯ್ತು.
First published:
18
Karnataka Polls 2023: ಬಿಎಂಟಿಸಿ ಬಸ್ನಲ್ಲಿ ರಾಹುಲ್ ಗಾಂಧಿ ಪ್ರಯಾಣ