ದಕ್ಷಿಣ ಒಳನಾಡಿನ ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದ ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ ಜಿಲ್ಲೆಗಳು ಬಹುತೇಕ ಜಲಾವೃತವಾಗಿದ್ದು ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ದಶಕಗಳ ನಂತರ ಸುರಿಯುತ್ತಿರುವ ಅತಿವೃಷ್ಟಿಯಿಂದ ಈ ಭಾಗದದಲ್ಲಿ ಅಕ್ಷರಶಃ ಪ್ರವಾಹ ಭೀತಿ ಎದುರಾಗಿದೆ. ಕೆಲವಡೆ ರಸ್ತೆ ಸಂಚಾರ ಅಸ್ತವ್ಯಸ್ಥವಾಗಿದೆ.