ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಶೃಂಗೇರಿ ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳು ಜಲಾವೃತವಾಗಿವೆ. ತುಂಗಾ ನದಿ ತಟದಲ್ಲಿರುವ ಕಪ್ಪೆ ಶಂಕರ ದೇವಸ್ಥಾನ ಸಹ ಸಂಪೂರ್ಣ ಮುಳುಗಡೆಯಾಗಿದೆ. ನದಿ ಪಾತ್ರದ ರಸ್ತೆಗಳನ್ನು ಪೊಲೀಸರು ಸಂಪೂರ್ಣ ಬಂದ್ ಮಾಡಿದ್ದಾರೆ.