ವಿವಿಧ ಕ್ಷೇತ್ರಗಳ 63 ಸಾಧಕರಿಗೆ 2018ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
2018ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಗುರುವಾರ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪ್ರದಾನ ಮಾಡಿದರು. ಮಾರ್ಗರೇಟ್ ಆಳ್ವ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎಲ್. ದತ್ತು, ನಟ ಜೈ ಜಗದೀಶ್ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 63 ಮಂದಿಗೆ ಪ್ರಶಸ್ತಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್, ಆಹಾರ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲ ಹಾಜರಿದ್ದರು.