Republic Day 2023: ರಾಜ್ಯದ ವಿವಿಧೆಡೆ ಗಣರಾಜ್ಯೋತ್ಸವ ಸಂಭ್ರಮ, ಎಲ್ಲೆಡೆ ದೇಶಭಕ್ತಿಯ ಸಡಗರ
ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಇಂದು ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಧ್ವಜಾರೋಹಣ ಮಾಡಿ ಗೌರವ ನಮನ ಸಲ್ಲಿಸಲಾಯಿತು. ಎಲ್ಲಾ ಶಾಲೆಗಳು ಹಾಗೂ ಸರ್ಕಾರಿ ಕಚೇರಿಗಳಲ್ಲೂ 74ನೇ ಗಣರಾಜ್ಯೋತ್ಸವ ಆಚರಿಸಲಾಯಿತು.
ರಾಜ್ಯದ ಪ್ರತಿಯೊಂದು ಶಾಲೆಯಲ್ಲೂ ಸಹ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ಪ್ರತಿಯೊಂದು ಶಾಲಾ ಮೈದಾನದಲ್ಲೂ ಸಹ ಧ್ವಜಾರೋಹಣ ಮಾಡಿ ಗೌರವ ನಮನ ಸಲ್ಲಿಸಲಾಯಿತು.
2/ 7
ದೇಶದಲ್ಲಿ 74 ನೇ ಗಣರಾಜ್ಯೋತ್ಸವ ಹಿನ್ನಲೆ ಪ್ರತಿಯೊಂದು ಶಾಲೆಗಳಲ್ಲೂ ಸಹ ಅದ್ದೂರಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಇದರೊಟ್ಟಿಗೆ ಮೆರವಣಿಗೆ ಹಾಗೂ ಪರೇಡ್ಗಳು ಕೂಡಾ ಜರುಗಿದವು.
3/ 7
ರಾಯಚೂರು ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಜಿಲ್ಲಾಡಳಿತದಿಂದ ಕಾರ್ಯಕ್ರಮ ಆಯೋಜನೆ ಮಾಡಲಾಯಿತು. ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ದ್ವಜಾರೋಹಣ ಜರುಗಿತು.
4/ 7
74 ನೇ ಗಣರಾಜ್ಯೋತ್ಸವ ಆಚರಣೆ ಹಿನ್ನೆಲೆ ಕೊಪ್ಪಳದಲ್ಲಿ ಸಚಿವ ಆನಂದ್ ಸಿಂಗ್ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
5/ 7
ಹಾಸನ ನಗರದ ಜಿಲ್ಲಾ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಮಹಾತ್ಮಾಗಾಂಧಿ ಹಾಗೂ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ಎಸ್ಪಿ, ಹರಿರಾಂ ಶಂಕರ್, ಶಾಸಕ ಪ್ರೀತಂಗೌಡ, ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
6/ 7
ಧಾರವಾಡ ಜಿಲ್ಲಾಡಳಿತದಿಂದ ಗಣರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಧಾರವಾಡದ ಆರ್.ಎನ್.ಶೆಟ್ಟಿ ಮೈದಾನದಲ್ಲಿ ಧ್ವಜಾರೋಹಣ ಮಾಡಲಾಯಿತು.
7/ 7
ಎಸ್.ಡಿ.ಎಮ್ ಕಾಲೇಜು ರತ್ನವರ್ಮ ಕ್ರೀಡಾಂಗಣದಲ್ಲೂ ಗಣರಾಜ್ಯೋತ್ಸವ ಅದ್ದೂರಿ ಆಚರಣೆ ಮಾಡಲಾಯಿತು. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಕ್ರೀಡಾಂಗಣದಲ್ಲಿ ಹಾಜರಿದ್ದರು.