Republic Day: ಇತಿಹಾಸದಲ್ಲಿ ಮೊದಲ ಬಾರಿ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯ ಸಂಭ್ರಮ!
ಇತಿಹಾಸದಲ್ಲಿ ಇದೇ ಮೊದಲ ಬಾರಿ ಇಲ್ಲಿ ಗಣರಾಜ್ಯೋತ್ಸವ ಆಚರಿಸಲಾಗಿದೆ. ಖುದ್ದು ಕಂದಾಯ ಇಲಾಖೆ ಇಲ್ಲಿ ಗಣರಾಜ್ಯೋತ್ಸವ ಆಚರಿಸಿದ್ದು, ಬೆಂಗಳೂರು ಉತ್ತರ ಉಪವಿಭಾಗ ಅಧಿಕಾರಿ ಡಾ.ಎಂಜೆ ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.
ಕಳೆದ ವರ್ಷದ ಸ್ವಾತಂತ್ರ್ಯ ದಿನದಂದು ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ರಾರಾಜಿಸಿತ್ತು, ಇದೀಗ ಇತಿಹಾಸದಲ್ಲಿ ಇದೇ ಮೊದಲ ಬಾರಿ ಇಲ್ಲಿ ಗಣರಾಜ್ಯೋತ್ಸವ ಆಚರಿಸಲಾಗಿದೆ.
2/ 8
ಖುದ್ದು ಕಂದಾಯ ಇಲಾಖೆ ಇಲ್ಲಿ ಗಣರಾಜ್ಯೋತ್ಸವ ಆಚರಿಸಿದ್ದು, ಬೆಂಗಳೂರು ಉತ್ತರ ಉಪವಿಭಾಗ ಅಧಿಕಾರಿ ಡಾ.ಎಂಜೆ ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣ ವೇಳೆ ಶಾಸಕ ಜಮೀರ್ ಅಹ್ಮದ್, ಪಿಸಿ ಮೋಹನ್ ಕೂಡಾ ಉಪಸ್ಥಿತರಿದ್ದರು.
3/ 8
ಧ್ವಜಾರೋಹಣ ಬಳಿಕ ಈದ್ಗಾ ಮೈದಾನದಲ್ಲಿ ರಾಷ್ಟಗೀತೆ ಹಾಗೂ ನಾಡಗೀತೆಯೂ ಮೊಳಗಿದೆ. ಕಾರ್ಯಕ್ರಮದಲ್ಲಿ ಭಾಗಿಯಾದ ಚಾಮರಾಜಪೇಟೆ ನಾಗರಿಕರು ಭಾರತ ಮಾತೆಗೆ ಜೈಕಾರ ಹಾಕಿ ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸಿದ್ದಾರೆ.
4/ 8
ಇನ್ನು ಸಂತ ತೆರೆಸಾ ಬಾಲಕಿಯರ ಶಾಲೆ, ಚಾಮರಾಜಪೇಟೆ ಬಾಲಕಿಯರ ಶಾಲೆ, ಸರ್ಕಾರಿ ಕನ್ನಡ, ಆಂಗ್ಲ ಪ್ರಾಥಮಿಕ ಶಾಲೆ ಸೇರಿದಂತೆ ವಿವಿಧ ಐದು ಶಾಲಾ ಮಕ್ಕಳೂ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
5/ 8
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ 100ಕ್ಕೂ ಅಧಿಕ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಬ್ಯಾಂಡ್ ಸೆಟ್, ಕಂಸಹಾಳೆ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಆದ್ರೆ ಸೂಕ್ಷ್ಮ ಪ್ರದೇಶವಾಗಿರೋದ್ರಿಂದ ಇತರೆ ಕಾರ್ಯಕ್ರಮಗಳಿಗೆ ಅವಕಾಶ ನೀಡಿಲ್ಲ.
6/ 8
ಸೂಕ್ಷ್ಮ ಪ್ರದೇಶವಾಗಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ಹೌದು ಮೈದಾನದ ಸುತ್ತ ಬ್ಯಾರಿಕೇಡ್ ಅಳವಡಿಸಿದ್ದು, ಮೈದಾನದ ಪೂರ್ವ ಭಾಗದಲ್ಲಿ ಧ್ವಜರೋಹಣಕ್ಕೆ ವೇದಿಕೆ ತಯಾರಿಸಲಾಗಿತ್ತು.
7/ 8
ಮೈದಾನ ಸುತ್ತ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರ್ಗಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ್ ಕೈಗೊಂಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮೈದಾನದ ಸುತ್ತ 50 ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ ಮಾಡಲಾಗಿದೆ.
8/ 8
ಮೈದಾನದ ಸುತ್ತ ಮುತ್ತಲಿನ ಬೃಹತ್ ಕಟ್ಟಡ ಮೇಲೆ ವಾಚರ್ ಗಳ ನೇಮಕ ಮಾಡಲಾಗಿದ್ದು, 4 ಎಸಿಪಿ, 10 ಇನ್ಸ್ಪೆಕ್ಟರ್, 40 ಸಬ್ ಇನ್ಸ್ಪೆಕ್ಟರ್,300 ಕ್ಕೂ ಹೆಚ್ಚು ಸಿಬ್ಬಂದಿ ಹಾಗೂ 6 ಕೆಎಸ್ ಆರ್ ತುಕಡಿಗಳನ್ನ ಭಧ್ರತೆಗೆ ನಿಯೋಜನೆ ಮಾಡಲಾಗಿದೆ.