Hassan: ಪ್ರವಾಸ ಮುಗಿಸಿ ವಾಪಸ್ ಆಗ್ತಿದ್ದ ವಿದ್ಯಾರ್ಥಿಗಳು, ಶಿಕ್ಷಕರಿದ್ದ ಖಾಸಗಿ ಬಸ್ ಪಲ್ಟಿ
ಕನಕಪುರದಿಂದ ಹಾಸನ ಜಿಲ್ಲೆಗೆ ಪ್ರವಾಸಕ್ಕೆ ಬಂದಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಬಸ್ ಬೇಲೂರು ಬಳಿ ಪಲ್ಟಿಯಾಗಿದೆ.
1/ 8
ಪ್ರವಾಸವನ್ನು ಆನಂದಿಸಿ ಹಿಂದಿರುಗುತ್ತಿದ್ದ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ.
2/ 8
ಹಾಸನ ಜಿಲ್ಲೆಯ ಬೇಲೂರು ಹೊರವಲಯದ ಕುವೆಂಪು ನಗರದಲ್ಲಿ ಬಸ್ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.
3/ 8
ಬಸ್ ಪಲ್ಟಿಯಾದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಮಂದಿಗೆ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
4/ 8
ಕನಕಪುರದಿಂದ ಬುಧವಾರ ಎರಡು ಬಸ್ಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಸೇರಿ ಒಟ್ಟು 71 ಮಂದಿ ಪ್ರವಾಸಕ್ಕೆ ತೆರಳಿದ್ದರು.
5/ 8
ಪ್ರವಾಸ ಮುಗಿಸಿ ವಾಪಾಸ್ ಆಗುವಾಗ ಇಂದು ಬೆಳಗ್ಗೆ ಬಸ್ ಪಲ್ಟಿಯಾಗಿದೆ. ನಾಲ್ವರು ವಿದ್ಯಾರ್ಥಿಗಳು ಮತ್ತು ಮೂವರು ಶಿಕ್ಷಕರು ಗಾಯಗೊಂಡಿದ್ದಾರೆ.
6/ 8
ಗಾಯಾಳುಗಳಿಗೆ ಬೇಲೂರು ಹಾಗೂ ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಸ್ ಪಲ್ಟಿಯಾಗುತ್ತಿದ್ದಂತೆ ಸ್ಥಳೀಯರು ಸಹಾಯಕ್ಕೆ ದೌಡಾಯಿಸಿದ್ದಾರೆ.
7/ 8
ಹಾಸನ ಜಿಲ್ಲೆಗೆ ಕನಕಪುರದ ಸರ್ಕಾರಿ ಶಾಲೆಯ ಎಸ್ಎಸ್ಎಲ್ಸಿ ಮಕ್ಕಳು ಹಾಗೂ ಶಿಕ್ಷಕರು ಬಂದಿದ್ದರು. ಹಿಂದಿರುಗುತ್ತಿರುವ ವೇಳೆ ಅಪಘಾತ ಸಂಭವಿಸಿದೆ.
8/ 8
ಅಪಘಾತ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೇಲೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.
First published: