Hijab ಧರಿಸಿ SSLC ಪರೀಕ್ಷೆ ಬರೆಯಲು ಅವಕಾಶ; ಏಳು ಶಿಕ್ಷಕರ ಅಮಾನತು
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ (SSLC Exam) ವಿದ್ಯಾರ್ಥಿಗಳು ವಸ್ತ್ರ ಸಂಹಿತೆ ನೀತಿ ಪಾಲಿಸುವುದು ಕಡ್ಡಾಯ ಎಂದು ಪರೀಕ್ಷೆಗೆ ಮುನ್ನವೇ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿತು. ಈ ನಡುವೆಯೂ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್ (Hijab) ಧರಿಸಲು ಶಿಕ್ಷಕರು ಅನುಮತಿ ನೀಡಿದ ಘಟನೆ ಗದಗದಲ್ಲಿ ನಡೆದಿದೆ.
ಹಿಜಾಬ್ ಧರಿಸಿ ಬಂದರೆ ಪರೀಕ್ಷೆ ಪ್ರವೇಶ ಇಲ್ಲ ಎಂಬ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ಮೀರಿ ಗದಗದ ಸಿಎಸ್ ಪಾಟೀಲ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಲಾಗಿದೆ.
2/ 8
ಮೊದಲ ದಿನದ ಪರೀಕ್ಷೆ ದಿನದಂದು ಕೆಲವು ವಿದ್ಯಾರ್ಥಿಗಳು ಹಿಜಾಬ್, ಬುರ್ಖಾ ಧರಿಸಿ ಬಂದಿದ್ದರು. ಈ ವೇಳೆ ಅವರಿಗೆ ಅಲ್ಲಿನ ಪರೀಕ್ಷಾ ಕೇಂದ್ರದ ಅಧಿಕಾರಿಗಳು ಯಾವುದೇ ಆಕ್ಷೇಪ ವ್ಯಕ್ತಪಡಿಸದೇ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿದೆ,
3/ 8
ಈ ಪ್ರಕರಣ ಬೆಳಕಿಗೆ ಬಂದಿದ್ದು, ವಸ್ತ್ರ ಸಂಹಿತೆ ನೀತಿ ಕಾಪಾಡದ ಏಳು ಮಂದಿ ಶಿಕ್ಷಕರನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
4/ 8
ಈ ಪ್ರಕರಣ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿಗಳ ವರದಿ ಹಿನ್ನೆಲೆ ಐವರು ಮೇಲ್ಚಿಚಾರಕರು, ಇಬ್ಬರು ಅಧೀಕ್ಷಕರು ಸೇರಿ 7 ಜನರ ಅಮಾನತು ಮಾಡಲಾಗಿದೆ.
5/ 8
ಪರೀಕ್ಷಾ ಕೇಂದ್ರದ ಅಧೀಕ್ಷಕರು ಕೆಬಿ ಭಜಂತ್ರಿ, ಬಿಎಸ್ ಹೊನ್ನಗುಡಿ ಹಾಗೂ ಕೊಠಡಿ ಮೇಲ್ವಿಚಾರಕರಾದ ಎಸ್.ಜಿ. ಗೋಡಕೆ, ಎಸ್.ಎಸ್. ಗುಜಮಾಗಡಿ, ವಿ.ಎನ್. ಕಿವುಡರ್, ಎಸ್.ಯು. ಹೊಕ್ಕಳದ, ಎಸ್.ಎಮ್. ಪತ್ತಾರ ಅವರನ್ನೂ ತಕ್ಷಣ ಅಮಾನತು ಮಾಡಲು ಗದಗ ಡಿಡಿಪಿಐ ಜಿ.ಎಮ್. ಬಸವಲಿಂಗಪ್ಪ ಆದೇಶ ಹೊರಡಿಸಿದ್ದಾರೆ.
6/ 8
ಇನ್ನು ಈ ಪ್ರಕರಣ ಸಂಬಂಧ ಕಲಬುರಗಿಯಲ್ಲಿಯೂ ಓರ್ವ ಶಿಕ್ಷಕರನ್ನು ಅಮಾನತು ಮಾಡಲಾಗಿದೆ.
7/ 8
ಕಲಬುರಗಿಯ ಜೇವರ್ಗಿಯ ಇಜೇರಿ ಗ್ರಾಮದ ಉರ್ದು ಶಾಲೆಯ ಶಿಕ್ಷಕ ಮಹಮ್ಮದ್ ಆಲಿ ಅವರನ್ನು ಅಮಾನತು ಮಾಡಿ ಬಿಇಒ ಶಾಂತಪ್ಪ ಗಂಗಪ್ಪ ಆದೇಶ ಹೊರಡಿಸಿದ್ದಾರೆ.
8/ 8
ಹಿಜಾಬ್ ಕುರಿತು ಹೈ ಕೋರ್ಟ್ ಆದೇಶದ ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಈ ಬಾರಿ ವಸ್ತ್ರ ಸಂಹಿತೆ ಪಾಲನೆ ಕಡ್ಡಾಯವಾಗಿದೆ.