ರಾಜ್ಯಕ್ಕೆ GOOD NEWS: ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿಸಲು ಕೇಂದ್ರದ ಗ್ರೀನ್​ಸಿಗ್ನಲ್​​

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಶುಭ ಸುದ್ದಿ ಸಿಕ್ಕಿದೆ. ಈಗ ಇರುವ ದ್ವಿಪಥ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲು 1200 ಕೋಟಿ ರೂ. ವೆಚ್ಚದ ಯೋಜನೆಗೆ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅನುಮೋದನೆ ನೀಡಿದ್ದಾರೆ.

First published:

  • 15

    ರಾಜ್ಯಕ್ಕೆ GOOD NEWS: ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿಸಲು ಕೇಂದ್ರದ ಗ್ರೀನ್​ಸಿಗ್ನಲ್​​

    ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಯೋಜನೆಯನ್ನು ಕೈಗೆತ್ತಿಕೊಂಡ 2 ವರ್ಷಗಳಲ್ಲಿ ಪೂರ್ಣಗೊಳಿಸಲಿದೆ ಎಂದು ಗಡ್ಕರಿ ಹೇಳಿದರು.

    MORE
    GALLERIES

  • 25

    ರಾಜ್ಯಕ್ಕೆ GOOD NEWS: ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿಸಲು ಕೇಂದ್ರದ ಗ್ರೀನ್​ಸಿಗ್ನಲ್​​

    ಇದೇ ವೇಳೆ ಯೋಜನೆಯ ಅನುಷ್ಠಾನಕ್ಕೆ ಸಂಪೂರ್ಣ ಸಹಕಾರ ಮತ್ತು ಶೀಘ್ರ ಅನುಮೋದನೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

    MORE
    GALLERIES

  • 35

    ರಾಜ್ಯಕ್ಕೆ GOOD NEWS: ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿಸಲು ಕೇಂದ್ರದ ಗ್ರೀನ್​ಸಿಗ್ನಲ್​​

    ಮಳೆಗಾಲದಲ್ಲಿ ಶಿರಾಡಿ ಘಾಟ್ ರಸ್ತೆ ಸಾಮಾನ್ಯವಾಗಿ ದಯನೀಯ ಸ್ಥಿತಿಯಲ್ಲಿದ್ದು, ತಕ್ಷಣದ ಮೇಲ್ದರ್ಜೆಗೇರಿಸುವ ಅಗತ್ಯವಿದೆ. ಮೇಲ್ದರ್ಜೆಗೇರಿಸುವುದರಿಂದ ಬೆಂಗಳೂರು-ಮಂಗಳೂರು ನಡುವಿನ ಹೆದ್ದಾರಿ ಸಂಪೂರ್ಣ ಚತುಷ್ಪಥ ರಸ್ತೆಯಾಗಲಿದೆ.

    MORE
    GALLERIES

  • 45

    ರಾಜ್ಯಕ್ಕೆ GOOD NEWS: ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿಸಲು ಕೇಂದ್ರದ ಗ್ರೀನ್​ಸಿಗ್ನಲ್​​

    ರಾಷ್ಟ್ರೀಯ ಹೆದ್ದಾರಿ 75 ರ ಚತುಷ್ಪಥವು ಈ ಪ್ರದೇಶದ ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸುತ್ತದೆ. ಶಿರಾಡಿ ಘಾಟ್ ಮೂಲಕ ಷಟ್ಪಥ ಸುರಂಗ ಮಾರ್ಗ ನಿರ್ಮಿಸುವ ಬಗ್ಗೆ ಅಧ್ಯಯನ ಕೈಗೊಳ್ಳಲು ಎನ್.ಹೆಚ್. ಎ. ಐ. ಗೆ ಕೇಂದ್ರ ಸಚಿವರು ಸೂಚಿದ್ದಾರೆ.

    MORE
    GALLERIES

  • 55

    ರಾಜ್ಯಕ್ಕೆ GOOD NEWS: ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿಸಲು ಕೇಂದ್ರದ ಗ್ರೀನ್​ಸಿಗ್ನಲ್​​

    ಶಿರಾಡಿ ಘಾಟ್ ರಸ್ತೆ ರಾಜ್ಯದ ಜೀವನಾಡಿ ಇದ್ದಂತೆ. ಈಗಿರುವ ರಸ್ತೆ ಕಿರಿದಾಗಿದೆ. ಇದನ್ನು ನಾಲ್ಕು ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಅನುಮೋದನೆ ನೀಡಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿಎಂ, ದಿ ಇಂಡಿಯನ್ ಎಕ್ಸ್ ಪ್ರೆಸ್ ಗೆ ಹೇಳಿಕೆ ನೀಡಿದ್ದಾರೆ.

    MORE
    GALLERIES