2023ರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ರಾಜ್ಯದಲ್ಲಿ ನೂತನ ಸರ್ಕಾರ ರಚಿಸಲಿ ಸಿದ್ಧವಾಗಿದೆ. ಶನಿವಾರ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಹಾಗೂ ಡಿಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನೆ ಸ್ವೀಕರಿಸಿದ್ದಾರೆ. ಸಿದ್ದರಾಮಯ್ಯ ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.