Belagavi Accident: ಸವದತ್ತಿ ಯಲ್ಲಮ್ಮ ಯಾತ್ರಾರ್ಥಿಗಳ ವಾಹನ ಅಪಘಾತ; ಆರು ಸಾವು, 16 ಜನರಿಗೆ ಗಾಯ
Savadatti Yallamma Devotees: ಸವದತ್ತಿ ಯಲ್ಲಮ್ಮನ ಜಾತ್ರೆಯಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಭಕ್ತರ ವಾಹನ ಅಪಘಾತಕ್ಕೆ ಒಳಗಾಗಿದೆ. ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆ.
ಭರತ ಹುಣ್ಣಿಮೆಯಂದು ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ಯಲ್ಲಮ್ಮ ದೇವಿಯ ದೇವಸ್ಥಾನದ ಜಾತ್ರೆ ನಡೆಯುತ್ತದೆ. ಈ ಹಿನ್ನೆಲೆ ಭಕ್ತರು ಈಗಿನಿಂದಲೇ ಸವದತ್ತಿಗೆ ತೆರಳುತ್ತಿದ್ದಾರೆ.
2/ 8
ಸವದತ್ತಿ ಯಲ್ಲಮ್ಮ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ವಾಹನ ಅಪಘಾತಕ್ಕೊಳಗಾಗಿದೆ. ಅಪಘಾತದಲ್ಲಿ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಓರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
3/ 8
ಕಡಕೋಳ ಪೊಲೀಸ್ ಠಾಣಾ ವ್ಯಾಪ್ತಿಯ ಚುಂಚನೂರು ಬಳಿ ಅಪಘಾತ ಸಂಭವಿಸಿದೆ. ವಿಠ್ಠಲ್-ರುಕ್ಮಿಣಿ ದೇವಸ್ಥಾನದ ಆಲದ ಮರಕ್ಕೆ ಮಹೇಂದ್ರ ಗೂಡ್ಸ್ ವಾಹನ ಡಿಕ್ಕಿಯಾಗಿದೆ.
4/ 8
ಹನಮ್ಮವ್ವ (24), ದೀಪಾ (31), ಸವಿತಾ(12), ಸುಪ್ರಿತಾ (11), ಮಾರುತಿ(42), ಇಂದ್ರವ್ವಾ(24) ಮೃತರು. ಗಾಯಾಳುಗಳನ್ನು ಗೋಕಾಕ್ ಸೇರಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
5/ 8
ಯಾತ್ರಾರ್ಥಿಗಳೆಲ್ಲರೂ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಹುಲಕುಂದ ಗ್ರಾಮದಿಂದ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ.
6/ 8
ರಸ್ತೆ ಅಪಘಾತದಲ್ಲಿ ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂಪಾಯಿ ನೀಡಲಾಗುವುದು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
7/ 8
ಅಪಘಾತದಲ್ಲಿ ಆರು ಜನರು ನಿಧನರಾಗಿದ್ದು, 16 ಮಂದಿ ಗಾಯಗೊಂಡಿದ್ದಾರೆ. ಸಿಎಂ ಬೊಮ್ಮಾಯಿ ಅವರು ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸುವಂತೆ ಹೇಳಿದ್ದಾರೆ. ಅದೇ ರೀತಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೋವಿಂದ ಕಾರಜೋಳ ಹೇಳಿದ್ದಾರೆ.
8/ 8
ಘಟನಾ ಸ್ಥಳಕ್ಕೆ ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.