ದೆಹಲಿಯ ಖರ್ಗೆ ನಿವಾಸಕ್ಕೆ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಭೇಟಿ ನೀಡಿದ್ರು. ಇದೇ ವೇಳೆ ಮಲ್ಲಿಕಾರ್ಜುನ್ ಖರ್ಗೆ ಪತ್ನಿ ಹಾಗೂ ಪುತ್ರ ಪ್ರಿಯಾಂಕ್ ಖರ್ಗೆ ಉಪಸ್ಥಿತರಿದ್ರು.
2/ 7
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಂಸದ ಶಶಿ ತರೂರ್ ಎದುರು ಗೆಲುವು ಸಾಧಿಸಿದ್ದಾರೆ.
3/ 7
ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಸೇರಿದಂತೆ ಕಾರ್ಯಕರ್ತರು ಖರ್ಗೆ ಅವರಿಗೆ ಶುಭ ಹಾರೈಸಿದ್ದಾರೆ.
4/ 7
ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಖರ್ಗೆ ಅವರಿಗೆ ಹಾರ್ದಿಕ ಅಭಿನಂದನೆಗಳು. ಪ್ರತಿಭೆ ಮತ್ತು ಅನುಭವವನ್ನು ಮೈಗೂಡಿಸಿಕೊಂಡ ಖರ್ಗೆಯವರಿಗೆ ಕಾಂಗ್ರೆಸ್ ಪಕ್ಷವನ್ನು ಯಶಸ್ಸಿ ಹಾದಿಯಲ್ಲಿ ಮುನ್ನಡೆಸುವ ಶಕ್ತಿ ಇದೆ.
5/ 7
ಖರ್ಗೆಯವರ ಆಯ್ಕೆ ಕನ್ನಡಿಗರಿಗೂ ಹೆಮ್ಮೆಯ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
6/ 7
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೃದಯ ಪೂರ್ವಕ ಅಭಿನಂದನೆಗಳು.
7/ 7
ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಎತ್ತರಕ್ಕೇರಲಿದೆ ಎನ್ನುವ ವಿಶ್ವಾಸವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.