ತುಮಕೂರು ನಗರ ಮತ್ತು ಸಿದ್ದಗಂಗಾ ಮಠದ ವ್ಯಾಪ್ತಿಯಲ್ಲಿ ಒಟ್ಟು ಎರಡು ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ. ಎಡಿಜಿಪಿ ಪ್ರತಾಪ್ ರೆಡ್ಡಿ, ಕೇಂದ್ರ ವಲಯ ಐಜಿ ಚಂದ್ರಶೇಖರ್ ಸ್ಥಳದಲ್ಲಿಯೇ ಇದ್ದು ಭದ್ರತೆ ಪರಿಶೀಲನೆ ಮಾಡುತ್ತಿದ್ದಾರೆ. ತುಮಕೂರು ಎಸ್ ಪಿ ರಾಹುಲ್ ಕುಮಾರ್ ಶಹಾಪುರ್ ವಾಡ್ ಹಾಗೂ ದಾವಣಗೆರೆ ಎಸ್ ಪಿ ಸೇರಿದಂತೆ ನಾಲ್ಕು ಎಸ್ ಪಿ ಗಳ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.