ಇಂದು ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಿರುವ ಮುಖ್ಯಮಂತ್ರಿಗಳಿಗೆ ಶೃಂಗೇರಿಯಲ್ಲಿ ಅಣಕವಾಗಿ ಬ್ಯಾನರ್ ಹಾಕಿ ಸ್ವಾಗತ ಕೋರಲಾಗಿದೆ. ಈ ಮೂಲಕ ಸರ್ಕಾರದ ವಿರುದ್ಧ ಶೃಂಗೇರಿ ಜನತೆ ತಮ್ಮ ಅಸಮಾಧಾನವನ್ನ ಹೊರ ಹಾಕಿದ್ದಾರೆ.
2/ 8
ದಯವಿಟ್ಟು ನಿಧಾನವಾಗಿ ಚಲಿಸಿ, ಇದು ಆಸ್ಪತ್ರೆ ಇಲ್ಲದ ಊರು. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲ. ಪದೇಪದೇ ಭರವಸೆ ನೀಡಿ ಸರ್ಕಾರ ಮಾತು ತಪ್ಪಿದೆ ಎಂದು ಬ್ಯಾನರ್ ನಲ್ಲಿ ಬರೆಯಲಾಗಿದೆ.
3/ 8
ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆಗಾಗಿ 15 ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಸರ್ಕಾರ, ಜಿಲ್ಲಾಡಳಿತದ ಧೋರಣೆಯಿಂದ ರೋಸಿಹೋಗಿರುವ ಸಾರ್ವಜನಿಕರು ಇಂದು ಸಿಎಂ ಆಗಮನ ಹಿನ್ನೆಲೆ ತಮ್ಮ ಅಸಮಾಧಾನವನ್ನು ಬ್ಯಾನರ್ ಮೂಲಕ ತೋರಿಸಿದ್ದಾರೆ.
4/ 8
ಶೃಂಗೇರಿಗೆ ಆಗಮಿಸಿದ ಸಿಎಂ ಬೊಮ್ಮಾಯಿ ಉಭಯಶ್ರೀಗಳಾದ ಭಾರತೀತೀರ್ಥ ಹಾಗೂ ವಿಧುಶೇಖರ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
5/ 8
ಈ ವೇಳೆ ಜಗದ್ಗುರುಗಳ ಜೊತೆ ಮುಖ್ಯಮಂತ್ರಿಗಳು ಮಾತುಕತೆ ನಡೆಸಿದರು. ಈ ವೇಳೆ ಸಿಎಂಗೆ ರಾಜಕೀಯ ಕಾರ್ಯದರ್ಶಿ ಜೀವರಾಜ್, ಶಾಸಕ ರಾಜೇಗೌಡ ಸಾಥ್ ನೀಡಿದರು.
6/ 8
ಪ್ರವಾಸಕ್ಕೂ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಮೂರು ದಿನಗಳ ಕಾಲ ಜಿಲ್ಲಾ ಪ್ರವಾಸ ಮಾಡ್ತೇನೆ. ಇವತ್ತು ಚಿಕ್ಕಮಗಳೂರು, ಶಿವಮೊಗ್ಗ, ನಾಳೆ ಕಲಬುರಗಿಗೆ ತೆರಳುತ್ತೇನೆ ಎಂದು ಹೇಳಿದರು.
7/ 8
ವರಿಷ್ಠರು ಹೇಳಿದಾಗ ದೆಹಲಿಗೆ ಹೋಗ್ತೇನೆ. ವರಿಷ್ಠರು ಯಾವಾಗ ಬಾ ಅಂತಾರೋ ಆಗ ದೆಹಲಿಗೆ ಹೋಗ್ತೇನೆ ರಾಜ್ಯದ ಅಭಿವೃದ್ಧಿ ವಿಚಾರದ ಬಗ್ಗೆ ಚರ್ಚೆ ಮಾಡುತ್ತೇನೆ ಎಂದಿದ್ದರು.
8/ 8
ಹುಬ್ಬಳ್ಳಿ ಗಲಾಟೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರಿಗೆ ಕಠಿಣ ಕ್ರಮ ಕೊಡಿಸ್ತೇವೆ. ಯಾರು ಕಾನೂನು ಕೈತಗೋತಾರೆ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಪೊಲೀಸ್ ಠಾಣೆ ಮೇಲೆ ದಾಳಿ ಮಾಡೋದು ಅಕ್ಷಮ್ಯ ಅಪರಾಧ ಎಂದು ಗುಡುಗಿದರು.