SSLC Exam Date 2022: ಎಸ್ಎಸ್ಎಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ
SSLC TimeTable 2022: ಕೊರೊನಾ, ಓಮಿಕ್ರಾನ್ ಪ್ರಕರಣಗಳ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 2 ವಾರಗಳ ಕಾಲ ಶಾಲೆಗಳನ್ನು ಬಂದ್ ಮಾಡಿ, ಆನ್ ಲೈನ್ ಕ್ಲಾಸ್ ಗೆ ಮಣೆ ಹಾಕಲಾಗಿದೆ. ಈ ಮಧ್ಯೆ SSLC ಪರೀಕ್ಷೆ ಬಗ್ಗೆ ಎದುರು ನೋಡುತ್ತಿರುವ ವಿದ್ಯಾರ್ಥಿಗಳು, ಪೋಷಕರ ಗೊಂದಲಕ್ಕೆ ಶಿಕ್ಷಣ ಇಲಾಖೆ ಸ್ಪಂದಿಸಿದೆ.
SSLC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಪ್ರಕಟಿಸಿದೆ. ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆಗಳು ನಡೆಯಲಿದೆ ಎಂದು ತಾತ್ಕಾಲಿಕ ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ. (ಸಾಂದರ್ಭಿಕ ಚಿತ್ರ)
2/ 4
ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ, ಮಾರ್ಚ್ 28 ಕನ್ನಡ (ಪ್ರಥಮ ಭಾಷೆ), ಮಾರ್ಚ್ 30 ಇಂಗ್ಲಿಷ್ (ದ್ವಿತೀಯ ಭಾಷೆ), ಏಪ್ರಿಲ್ 1ರಂದು ಕೋರ್ ಸಬ್ಜೆಕ್ಟ್ ಇರಲಿದೆ.
3/ 4
ಏಪ್ರಿಲ್ 4ರಂದು ಗಣಿತ-ಸಮಾಜಶಾಸ್ತ್ರ, ಏಪ್ರಿಲ್ 6ರಂದು ಸಮಾಜವಿಜ್ಞಾನ, ಏಪ್ರಿಲ್ 8ರಂದು ತೃತೀಯ ಭಾಷೆ ಹಿಂದಿ ಪರೀಕ್ಷೆ ನಡೆಯಲಿದೆ.
4/ 4
ಏಪ್ರಿಲ್ 11ರಂದು ವಿಜ್ಞಾನ, ರಾಜ್ಯಶಾಸ್ತ್ರ, ಕನ್ನಡ ಶಾಸ್ತ್ರೀಯ/ಹಿಂದೂಸ್ಥಾನ ಸಂಗೀತದ ಪರೀಕ್ಷೆ ಇರಲಿದೆ. ಪ್ರತಿ ದಿನ ಬೆಳಗ್ಗೆ 10.30ರಿಂದ ಪರೀಕ್ಷೆ ಆರಂಭವಾಗಲಿದೆ. ವಿದ್ಯಾರ್ಥಿಗಳು, ಪೋಷಕರಿಗೆ ಆಕ್ಷೇಪಣೆಗಳಿದ್ದರೆ ಜ.6ರಿಂದ 14ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.