ಈಗಾಗಲೇ ಸಕ್ರಾ ಆಸ್ಪತ್ರೆಯ 48 ವರ್ಷದ ವ್ಯಕ್ತಿಗೆ ಯಕೃತ್, ಮಣಿಪಾಲ್ ಆಸ್ಪತ್ರೆಯ 40 ವರ್ಷದ ಮಹಿಳೆಗೆ ಬಲಭಾಗದ ಮೂತ್ರಪಿಂಡ, ಐಎನ್‌ಯು ಆಸ್ಪತ್ರೆಯ 35 ವರ್ಷದ ಪುರುಷನಿಗೆ ಎಡಭಾಗದ ಮೂತ್ರಪಿಂಡ ಕಸಿ ಮಾಡಲಾಗಿದೆ. ಮಣಿಪಾಲ್ ಆಸ್ಪತ್ರೆಗೆ ಹೃದಯ ನಾಳಗಳನ್ನು ಮತ್ತು ಮಿಂಟೋ ಕಣ್ಣಿನ ಆಸ್ಪತ್ರೆಗೆ ಕಾರ್ನಿಯಾಗಳನ್ನು ಕಳಿಸಿದ್ದು, ಅರ್ಹ ಮೂರು ಮಂದಿಗೆ ಕಸಿ ಮಾಡಲಾಗುವುದು ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.