Congress protest: ಎಲ್​ಪಿಜಿ ಸಿಲಿಂಡರ್​ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್​ ಪ್ರತಿಭಟನೆ; ರಸ್ತೆಯಲ್ಲಿಯೇ ಇಡ್ಲಿ ಸವಿದ ಡಿಕೆಶಿ

ಎಲ್​ಪಿಜಿ ಸಿಲಿಂಡರ್​ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್​ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿತು. ನಗರದ ಮೌರ್ಯ ಸರ್ಕಲ್​ನಲ್ಲಿ ನಡು ರಸ್ತೆಯಲ್ಲಿ ಅಡುಗೆ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್​ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರಸ್ತೆಯಲ್ಲಿಯೇ ತಿಂಡಿ ಸವಿಯುವುದರ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಗಮನಸೆಳೆದರು.

First published: