Kolar: ಸರ್ಕಾರಿ ಶಾಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಪ್ರಾರ್ಥನೆಗೆ ಪ್ರತ್ಯೇಕ ಕೊಠಡಿ: ಹಿಂದೂ ಸಂಘಟನೆಗಳಿಂದ ವಿರೋಧ
ಸರ್ಕಾರಿ ಶಾಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರತಿ ಶುಕ್ರವಾರ ಪ್ರಾರ್ಥನೆ (Namaz) ಸಲ್ಲಿಸಲು ಅವಕಾಶ ನೀಡಿರುವ ವಿಚಾರ ವಿವಾದದಕ್ಕೆ ಗುರಿಯಾಗಿದೆ. ಶಿಕ್ಷಕರು ತೆಗೆದುಕೊಂಡ ನಿರ್ಧಾರ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿರುವ ಶಾಲೆ ವಿವಾದದ ಸುಳಿಯಲ್ಲಿ ಸಿಲುಕಿದೆ. ಸೋಮೇಶ್ವರ ಪಾಳ್ಯದ ಬಳೇಚಂಗಪ್ಪ ಸರ್ಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ನಮಾಜ್ ಮಾಡಲು ಅವಕಾಶ ಕಲ್ಪಿಸಲಾಗಿದೆ. (ಸಾಂದರ್ಭಿಕ ಚಿತ್ರ)
2/ 5
ಕಳೆದ ಎರಡು ತಿಂಗಳಿಂದ ಶಾಲೆಯಲ್ಲಿ ಮಕ್ಕಳು ಪ್ರತಿ ಶುಕ್ರವಾರ ಸಾಮೂಹಿಕವಾಗಿ ಒಮ್ಮೆ ನಮಾಜ್ ಮಾಡುತ್ತಿದ್ದಾರೆ. ಈ ವಿಷಯ ತಿಳಿದು ಶಾಲೆಗೆ ಭೇಟಿ ನೀಡಿದ ಹಿಂದೂ ಸಂಘಟನೆ ಕಾರ್ಯಕರ್ತರು ನಮಾಜ್ ಮಾಡುತ್ತಿರುವ ದೃಶ್ಯಗಳನ್ನು ಮೊಬೈಲ್ ನಲ್ಲಿ ಸೆರೆ ಹಿಡಿದುಕೊಂಡಿದ್ದಾರೆ. (ಸಾಂದರ್ಭಿಕ ಚಿತ್ರ)
3/ 5
ಕಳೆದ ಎರಡು ತಿಂಗಳಿಂದ ಒಂದು ಧರ್ಮದವರಿಗೆ ಪ್ರಾರ್ಥನೆಗೆ ಅವಕಾಶ ನೀಡಿದ್ದಕ್ಕೆ ಮುಳಬಾಗಿಲು ತಾಲೂಕಿನ ಹಿಂದೂಪರ ಸಂಘಟನೆಗಳಿಂದ ಆಕ್ಷೇಪ ವ್ಯಕ್ತವಾಗಿದೆ. ಪ್ರತಿ ಶುಕ್ರವಾರ ಮಧ್ಯಾಹ್ನ 12 ರಿಂದ 1.30 ವರೆಗೂ ನಮಾಜ್ ಗೆ ಅವಕಾಶ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)
4/ 5
ಶಾಲೆಯಲ್ಲಿ ನಮಾಜ್ ಗೆ ಅವಕಾಶ ನೀಡಿರುವ ವಿಷಯ ನಮ್ಮ ಗಮನಕ್ಕೆ ಬಂದಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜೇಶ್ಚರಿ ದೇವಿ ಹೇಳಿದ್ದಾರೆ. ಈ ಕುರಿತು ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)
5/ 5
ಪ್ರತಿ ಶುಕ್ರವಾರ ಮುಸ್ಲಿಂ ವಿದ್ಯಾರ್ಥಿಗಳು ಶಾಲೆಗೆ ಗೈರಾಗುತ್ತಿದ್ದರು. ಆದ್ದರಿಂದ ಶಾಲೆಯ ಒಂದು ಕೊಠಡಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಈಗ ನಮಾಜ್ ಬಳಿಕ ಊಟ ಮಾಡಿದ ನಂತರ ತರಗತಿಗೆ ಹಾಜರಾಗುತ್ತಿದ್ದಾರೆ ಎಂದು ಶಿಕ್ಷಕರು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. (ಸಾಂದರ್ಭಿಕ ಚಿತ್ರ)
First published:
15