Karnataka Politics: ಸಂಸದೆ ಸುಮಲತಾ ಬಿಜೆಪಿ ಸೇರುವ ಬಗ್ಗೆ ಮಾಹಿತಿ ಬಿಚ್ಚಿಟ್ಟ ಬೆಂಬಲಿಗ!

Karnataka Politics:: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಆಗಾಗ್ಗೆ ಸದ್ದು ಮಾಡುತ್ತಿರುತ್ತಾರೆ. ಕೆಲ ದಿನಗಳ ಹಿಂದಷ್ಟೇ ಅವರು ಬಿಜೆಪಿ ಸೇರುತ್ತಾರೆಂಬ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಉಂಟು ಮಾಡಿತ್ತು. ಬಳಿಕ ಆ ಮಾತು ಅಲ್ಲಿಗೇ ನಿಂತಿತ್ತಾದರೂ ಇದೀಗ ಮತ್ತೆ ಅದೇ ಚರ್ಚೆ ಮುನ್ನೆಲೆಗೆ ಬಂದಿದೆ. ಸುಮಲತಾ ಬೆಂಬಲಿಗನೊಬ್ಬ ಹೇಳಿಕೆ ಮತ್ತೆ ಇದೇ ಚರ್ಚೆಗೆ ಇಂಬು ನೀಡಿದೆ. ಹೌದು ಸಂಸದೆ ಸುಮಲತಾ ಬೆಂಬಲಿಗ ಇಂಡುವಾಳು ಸಚ್ಚಿದಾನಂದ ಹೇಳಿಕೆ ಸದ್ಯ ಭಾರೀ ಚರ್ಚೆ ಹುಟ್ಟಿಸಿದೆ. ಸುಮಲತಾ ಬಿಜೆಪಿ ಸೇರುವ ಬಗ್ಗೆ ಮಾತನಾಡಿದ ಅವರು ನಾನು ಬಿಜೆಪಿ ಸಂಪರ್ಕದಲ್ಲಿ ಇರೋದು ನಿಜ, ನಾನು ಎಲ್ಲಿರ್ತೀನಿ ಅಲ್ಲಿ ಸುಮಲತಾ ಇರ್ತಾರೆ ಎಂದು ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಉಂಟು ಮಾಡಿದೆ.

First published: