ಇದೇ ಅಕ್ಟೋಬರ್ 17ರಂದು ಕೊಡಗಿನ ಭಾಗಮಂಡಲ ಬಳಿಯ ತಲಕಾವೇರಿಯಲ್ಲಿ ತೀರ್ಥೋದ್ಭವ ಕಾರ್ಯಕ್ರಮ ನಡೆಯಲಿದ್ದು, ಅಂದು ಸಂಜೆ 7.21ಕ್ಕೆ ತಲಕಾವೇರಿಯಲ್ಲಿ ಬ್ರಹ್ಮ ಕುಂಡಿಕೆಯಿಂದ ಕಾವೇರಿ ಜಲಧಾರೆ ತೀರ್ಥೋದ್ಭವ ನಡೆಯಲಿದೆ.
2/ 8
ಕೊರೋನಾ ಹಿನ್ನೆಲೆ ಕಳೆದ ಎರಡು ವರ್ಷಗಳಿಂದ ಉತ್ಸವಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಇದೀಗ ಭಕ್ತರಿಗೆ ಅವಕಾಶ ನೀಡಲಾಗಿದ್ದು, ಈ ಬಾರಿ ಹೆಚ್ಚಿನ ಸಂಖ್ಯೆಯ ಭಕ್ತರು ತಲಕಾವೇರಿಗೆ ಭೇಟಿ ನೀಡುವ ನಿರೀಕ್ಷೆಯಿದೆ.
3/ 8
ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಕಾವೇರಿ ನದಿಯ ಹೂಳು ತೆಗೆಯುವ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ. ದೇವಾಲಯದ ಪಟ್ಟಣಗಳಾದ ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ತಾತ್ಕಾಲಿಕ ಶೌಚಾಲಯಗಳನ್ನು ಸ್ಥಾಪಿಸಲಾಗುತ್ತಿದೆ.
4/ 8
ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಭಕ್ತರಿಗೆ ಎಲ್ಲ ಮೂಲ ಸೌಕರ್ಯ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
5/ 8
ಭಕ್ತಾದಿಗಳ ಅನುಕೂಲಕ್ಕಾಗಿ ಮಡಿಕೇರಿಯಿಂದ ತಲಕಾವೇರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ವ್ಯವಸ್ಥೆ ಕೂಡ ಮಾಡಿದೆ.
6/ 8
ಕೊಡಗು ಏಕೀಕರಣ ರಂಗವು ಎರಡು ದೇವಾಲಯಗಳ ಪಟ್ಟಣಗಳಲ್ಲಿ ಅಕ್ಟೋಬರ್ 17 ರಿಂದ ನವೆಂಬರ್ 17 ರವರೆಗೆ ಭಕ್ತರಿಗೆ ಉಚಿತ ಆಹಾರವನ್ನು ನೀಡಲಿದೆ.
7/ 8
ಭದ್ರತೆಗಾಗಿ ಎರಡೂ ಪಟ್ಟಣಗಳಲ್ಲಿ 25 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು .
8/ 8
ಡಿಎಆರ್ ಐದು ತುಕಡಿಗಳು, ಕೆಎಸ್ಆರ್ ಪಿ ಎರಡು ತುಕಡಿಗಳು ಮತ್ತು 400 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.